Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ

ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ

Spread the love

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿನ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ ಆವರಣದಿಂದ 500 ಮೀಟರ್ ಸುತ್ತಳತೆಯಲ್ಲಿ ಹಾಗೂ ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಿ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಆದೇಶಿಸಿದ್ದಾರೆ.

ಬೆಳಗಾವಿ ನಗರದ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ ಆವರಣದಿಂದ 500 ಮೀಟರ್ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ (ಸರ್ಕಾರಿ ಸಭೆ-ಸಮಾರಂಭ ಹೊರತುಪಡಿಸಿ) ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ.

ಈ ಪ್ರದೇಶದಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ ಆವರಣದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು ಹಾಡುವದನ್ನು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸುವುದು. ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಪ್ರಕ್ರೀಯೆ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಮದ್ಯ ಮಾರಾಟ ನಿಷೇಧ

  ಗ್ರಾಮಪಂಚಾಯತ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯ ಕಾಲಕ್ಕೆ ಬೆಳಗಾವಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21(1) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಬೆಳಗಾವಿ ನಗರದ, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 30/12/2020 ರಂದು ಬೆಳಿಗ್ಗೆ 0600 ಗಂಟೆಯಿಂದ ದಿನಾಂಕ: 31/12/2020 ರಂದು ಬೆಳಿಗ್ಗೆ 0600 ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್‍ಗಳಲ್ಲಿ, ಕ್ಲಬ್‍ಗಳಲ್ಲಿ ಮತ್ತು ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ಮತ್ತು
ಮದ್ಯ ಸಾಗಣಿಕೆಯನ್ನು ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ನಿಷೇಧಿಸಿ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‍ಬಿಸಿಎಲ್ ಡಿಪೋಗಳನ್ನು, ಹೊಟೇಲ್‍ಗಳಲ್ಲಿರುವ ಬಾರ್‍ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್‍ಪೆಕ್ಟರ್ ಹಾಗೂ ಉಪ ವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ
ಸೂಕ್ತ ಕ್ರಮ ಕೈಗೊಳ್ಳಬೇಕೆಂದ ಆದೇಶ ನೀಡಿದ್ದಾರೆ.
ಅಬಕಾರಿ ಉಪ ಆಯುಕ್ತರು, ಬೆಳಗಾವಿ ತಾಲೂಕ ಮತ್ತು ಉಪ ಪೊಲೀಸ್ ಆಯುಕ್ತರು
(ಅ&ಸಂ) ಬೆಳಗಾವಿ ನಗರ ಹಾಗೂ ಅವರ ಅಧೀನ ಅಧಿಕಾರಿಗಳು, ಹೆಚ್ಚುವರಿ
ಅಬಕಾರಿ ಅಧೀಕ್ಷಕರು, ಬೆಳಗಾವಿ ಮತ್ತು ಅಬಕಾರಿ ಉಪ-ಅಧೀಕ್ಷಕರು, ಬೆಳಗಾವಿ ಇವರುಗಳು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ  ತರುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Spread the love

About Laxminews 24x7

Check Also

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the loveಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ