Breaking News

ಬೆಳಗಾವಿಯ ಜಿಐಟಿಯಲ್ಲಿ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟನೆ

Spread the love

ಬೆಳಗಾವಿಯ ಜಿಐಟಿಯಲ್ಲಿ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟನೆ
ಬೆಳಗಾವಿಯ ಕೆಎಲ್‌ಎಸ್ ಜಿಐಟಿ ಮಹಾವಿದ್ಯಾಲಯ
ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟನೆ
ಫಾಸ್‌ರಾಕ್ ಪ್ರಾಯೋಜಕತ್ವದಲ್ಲಿ ನಿರ್ಮಾಣ
ವಿವಿಧ ಗಣ್ಯರಿಂದ ನೂತನ ಪ್ರಯೋಗಾಲಯಕ್ಕೆ ಚಾಲನೆ
ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ನೂತನ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು.
ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಇಂದು, ಫಾಸ್‌ರಾಕ್ ಕೆಮಿಕಲ್ಸ್ (ಇಂಡಿಯಾ) ಪ್ರೈ. ಲಿಮಿಟೆಡ್ ‘ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯ ನೆರವಿನಿಂದ ನಿರ್ಮಿಸಲಾದ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು.
ಕಾಲೇಜಿನ ಸ್ಟ್ರಕ್ಚರಲ್ ಇಂಜಿನಿಯರಿಂಗ್ ಪ್ರಯೋಗಾಲಯದಲ್ಲಿ ನಡೆದ ಈ ಮಹತ್ವದ ಸಮಾರಂಭಕ್ಕೆ ಬೆಂಗಳೂರಿನ ಫಾಸ್‌ರಾಕ್ ಕಂಪನಿಯ ಜನರಲ್ ಮ್ಯಾನೇಜರ್ ಶಂಕರ್ ಕೊತ್ತೂರು ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ನೂತನ ಪ್ರಯೋಗಾಲಯಕ್ಕೆ ಚಾಲನೆ ನೀಡಿದರು.
ಕೆಎಲ್‌ಎಸ್ ಜಿಐಟಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರಾಜೇಂದ್ರ ಬೆಳಗಾಂವಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಅತ್ಯಾಧುನಿಕ ಪ್ರಯೋಗಾಲಯವು ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಮತ್ತು ಸಂಶೋಧಕರಿಗೆ ಅತ್ಯುತ್ತಮ ಗುಣಮಟ್ಟದ ಸಾಮಗ್ರಿ ಪರೀಕ್ಷೆ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಅನುಕೂಲವನ್ನು ಕಲ್ಪಿಸಲಿದೆ. ಬೈಟ್
ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ವೈಭವ್ ಆರ್. ಚಾಟೆ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್. ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ