Breaking News

ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು: Z.P.C.E.O.ದರ್ಶನ್.

Spread the love

: ಕಲೆ ಮತ್ತು ಪ್ರತಿಭೆ ಎಲ್ಲರಲ್ಲಿಯೂ ಇದೆ ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್. ಎಚ್.ವಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಡಿ.29) ನಗರದ ಮಹಾಂತ ಭವನದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ಜಿಲ್ಲಾ ಮಟ್ಟದ ಯುವ ಉತ್ಸವ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲೆ ಮತ್ತು ಕ್ರೀಡೆಗೆ ಪ್ರೋತ್ಸಾಹ ಬಹಳ ಅವಶ್ಯಕ. ಪ್ರತಿಭೆಯು ಸೀಮಿತವಾಗಬಾರದು ಸ್ಪರ್ಧಿಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಜಯಗಳಿಸಿ ಕೀರ್ತಿ ತರಬೇಕು. ಈ ನಿಟ್ಟಿನಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಮಾಜ ಬೆಳವಣಿಗೆ ಹೊಂದಲು ವಿದ್ಯೆ, ಬುದ್ಧಿ, ಸಂಸ್ಕೃತಿ ಮತ್ತು ಕ್ರೀಡೆ ಬಹಳ ಮುಖ್ಯವಾಗಿದೆ. ಇದರ ಜೊತೆಗೆ ಉತ್ತಮವಾದ ಆರೋಗ್ಯ ಮತ್ತು ಧನಾತ್ಮಕ ವಾತಾವರಣ ಸೃಷ್ಟಿ ಮಾಡಲು ಸಹಾಯವಾಗುತ್ತದೆ ಎಂದು ದರ್ಶನ್ ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತರಾಷ್ಟ್ರೀಯ ಕುಸ್ತಿಪಟು ರತನಕುಮಾರ್ ಮಠಪತಿ ಅವರು, “ಕ್ರೀಡಾ ಸ್ಪರ್ಧಿಗಳಿಗೆ ಉತ್ತಮ ಆರೋಗ್ಯವೇ ಅಡಿಪಾಯ. ನಿಮ್ಮ ಗುರಿಯ ಜೊತೆಗೆ ಆರೋಗ್ಯದ ಬಗ್ಗೆ ಗಮನವಿರಬೇಕು” ಎಂದು ಸಲಹೆ ನೀಡಿದರು.

ಅತಿಥಿಗಳಾಗಿ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಲ್ಲೇಶ ಚೌಗಲೆ, ಭರತ್ ಕಲಾಚಂದ್ರ ಮರಾಠೆ, ಸಿದ್ದಣ್ಣ ದುರದುಂಡಿ ಭಾಗವಹಿಸಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಎಚ್.ಡಿ ಕೋಳೇಕರ ಹಾಗೂ ಕ್ರೀಡಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಉದ್ಘಾಟನೆಯ ನಂತರ ಯುವಕ-ಯುವತಿರಿಗಾಗಿ ಪ್ರತ್ಯೇಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಾನಪದ ನೃತ್ಯ, ಜಾನಪದ ಗೀತೆ, ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ವಾದ್ಯ ಸಂಗೀತ, ಆಶುಭಾಷಣ ಸ್ಪರ್ಧೆ, ಪ್ರಾದೇಶಿಕ ಉಡುಗೆ ಸ್ಪರ್ಧೆ,ಬೀದಿ ನಾಟಕ, ದೃಶ್ಯ ಕಲೆ, ಹಾಗೂ ಅಭಿವ್ಯಕ್ತಿ ಕಲೆ ಮತ್ತಿತರ ಸರ್ಧೆಗಳನ್ನು ನಡೆಸಲಾಯಿತು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ