Breaking News

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ

Spread the love

ರಾಮನಗರ : ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಸರ್ಕಾರ ಖಾತಾ ಪರಿವರ್ತನೆ ಹೆಸರಿನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಆದಾಯ ತರಲು ಹೊರಟಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್​ಆರ್ ವ್ಯಾಲ್ಯೂ ಮೇಲೆ ದರ ಫಿಕ್ಸ್ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದರು.

ಬೆಂಗಳೂರಲ್ಲಿ 7.5 ಲಕ್ಷ ಮನೆಗಳು ಇದಕ್ಕೆ ಒಳಪಡ್ತವೆ. ಅದಕ್ಕೆ 100 ದಿನ ಟೈಂ ಲೈನ್ ಫಿಕ್ಸ್ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್​ಆರ್ ವ್ಯಾಲ್ಯೂ ಇದೆ. ಇದರಿಂದ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್​ ಕೊಡ್ತಾವ್ರೆ ಎಂದು ಸರ್ಕಾರದ ವಿರುದ್ಧ ನಿಖಿಲ್​ ವಾಗ್ದಾಳಿ ನಡೆಸಿದರು.

ಹೆಚ್​ಡಿಕೆ ಕೊಟ್ಟ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ – ಕುಮಾರಸ್ವಾಮಿ ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಣ್ಣ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ಕೊಟ್ಟಂತ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ. ಅದನ್ನು ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಎಂದು ಮಾತನಾಡ್ತೀವಿ ಎಂದು ಹೇಳುವ ಮೂಲಕ ಡಿಕೆಶಿಗೆ ತಿರುಗೇಟು ನೀಡಿದರು.

ಭವಿಷ್ಯ ನುಡಿಯೋಕೆ ಡಿಕೆಶಿ ಜ್ಯೋತಿಷಿನಾ? ಮುಂದೆ ಜೆಡಿಎಸ್ 8 ರಿಂದ 9 ಸ್ಥಾನ ಬರುತ್ತೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡ್ತಾರೆ. ಭವಿಷ್ಯ ಹೇಳೋಕೆ ಅವರೇನು ಜ್ಯೋತಿಷಿನಾ.? ಅವರು ಭವಿಷ್ಯ ನುಡಿಯಲಿ, ಟೈಂ ಬಂದಾಗ ಮಾತಾಡ್ತೀವಿ ಎಂದು ಟಾಂಗ್ ಕೊಟ್ಟರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯ. ಶಾಸಕರಿಗೆ ಅನುದಾನ ಕೊಡ್ತೀವಿ ಅಂತ ಹೇಳಿ ಕೊಟ್ಟಿಲ್ಲ. ಒಬ್ಬ ಶಾಸಕನಿಗೆ 10 ಕೋಟಿ ಅನುದಾನವೂ ಸಿಕ್ಕಿಲ್ಲ. ಬಿಜೆಪಿ-ಜೆಡಿಎಸ್ ಬಿಡಿ ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಅಂತ ಹೇಳ್ತಾರೆ. ಕಂಟ್ರಾಕ್ಟರ್​​ಗಳ ಕಥೆ ಏನಾಗಿದೆ?. ಅವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದರು.

ನವೆಂಬರ್ ಕ್ರಾಂತಿ ಅಂತ ಮಾತಾಡ್ತಾರೆ. ಅದೇನು ಕ್ರಾಂತಿ ಮಾಡ್ತಾರೋ ನೋಡೋಣ. ಇವರ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಜನ ಬಲಿಪಶು ಆಗ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ

Spread the loveಧಾರವಾಡ, ಅಕ್ಟೋಬರ್​ 25: ಡಿಸೆಂಬರ್​ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ