Breaking News

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಮೇಲ್ಸೇತುವೆಗಳ ಮೇಲೆ ಸಂಚಾರ ನಿಷೇಧ

Spread the love

ಬೆಂಗಳೂರು, – ಎಂಜಿ ರಸ್ತೆ ಹಾಗೂ ಸುತ್ತಮುತ್ತಲ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ನಡೆಯುವ ಸಾಧ್ಯತೆ ಇರುವುದರಿಂದ ಅದನ್ನು ತಡೆಯಲು ಸಂಚಾರ ನಿಷೇಧ ಮಾಡಲಾಗಿದ್ದು, ಜತೆಗೆ ನಗರದಾದ್ಯಂತ ಇರುವ ಎಲ್ಲ ಮೇಲ್ಸೇತುವೆಗಳ ಮೇಲೂ ಸಂಚಾರವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾಕ್ರ್ಸ್ ರಸ್ತೆ, ಚರ್ಚ್‍ಸ್ಟ್ರೀಟ್‍ಗಳಲ್ಲಿ ಜನರು ಗುಂಪು ಸೇರುವ ಸಾಧ್ಯತೆಗಳಿವೆ. ಹಾಗಾಗಿ ಅನಿಲ್‍ಕುಂಬ್ಳೆ ವೃತ್ತದಿಂದ ಮೆಯೋಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್‍ವರೆಗೆ ರಸ್ತೆಯ ಎರಡೂ ಕಡೆ ಕಾವೇರಿ ಎಂಪೋರಿಯಂನಿಂದ ಅಪೇರಾ ಜಂಕ್ಷನ್‍ವರೆಗೆ, ಬ್ರಿಗೇಡ್ ರಸ್ತೆ ಜಂಕ್ಷನ್‍ನಿಂದ ಮ್ಯೂಜಿಯಂ ರಸ್ತೆ ಜಂಕ್ಷನ್‍ವರೆಗೆ, ಎಂಜಿ ರಸ್ತೆ ಜಂಕ್ಷನ್‍ನಿಂದ ಹಳೆ ಪೋಸ್ಟ್ ಆಫೀಸ್ ಜಂಕ್ಷನ್‍ವರೆಗೆ, ರೆಸ್ಟ್‍ಹೌಸ್ ಪಾರ್ಕ್ ರಸ್ತೆಯ ಮ್ಯೂಜಿಯಂ ರಸ್ತೆ ಜಂಕ್ಷನ್‍ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್‍ವರೆಗೆ ಮತ್ತು ಚರ್ಚ್‍ಸ್ಟ್ರೀಟ್ ರಸ್ತೆವರೆಗೆ, ರೆಸಿಡೆನ್ಸಿ ರಸ್ತೆಯ ಆಶೀರ್ವಾದಂ ಜಂಕ್ಷನ್‍ನಿಂದ ಮೇಯೋಹಾಲ್ ಜಂಕ್ಷನ್‍ವರೆಗೆ ತುರ್ತು ವಾಹನ ಹಾಗೂ ಕರ್ತವ್ಯನಿರತ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಮತ್ತು ಈ ಭಾಗದಲ್ಲಿ ವಾಹನಗಳ ಪಾರ್ಕಿಂಗ್ ಕೂಡ ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ