Breaking News

ರೈತನ ಮೇಲೆ ಹುಲಿ ದಾಳಿ ಪ್ರಕರಣ: ನಿರ್ಲಕ್ಷ್ಯ ತೋರಿದ್ದರೆ ಅಧಿಕಾರಿಗಳ ಮೇಲೆ ಕ್ರಮ- ಸಚಿವ ಖಂಡ್ರೆ

Spread the love

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ (ಮುಳ್ಳೂರು) ಬಳಿ ರೈತರೊಬ್ಬರ ಮೇಲೆ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ ತಿಳಿಸಿದರು.

ಇಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ಓಡಾಟದ ಬಗ್ಗೆ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ ಮತ್ತು ಹೆಚ್.ಡಿ.ಕೋಟೆ, ಸರಗೂರಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶವಿದ್ದರೂ ಮೈಸೂರಿಗೆ ತಂದಿರುವ ಬಗ್ಗೆ ತನಿಖೆ ಮಾಡಿಸಿ ಕ್ರಮ ಜರುಗಿಸಲಾಗುವುದು ಎಂದರು.

ಮಾನವ-ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ, ಹಿಂದಿನಿಂದಲೂ ಇದೆ. ಅರಣ್ಯದಂಚಿನ ಗ್ರಾಮದ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಇಂದಿನ ಅಗತ್ಯ ಎಂದು ಹೇಳಿದರು.

ರಾಜಶೇಖರ್ ಅವರ ಮೃತದೇಹವನ್ನು ಮೈಸೂರಿಗೆ ತಂದಿರುವ ವಿಚಾರ ಮೈಸೂರಿಗೆ ಬರುವಾಗ ತಿಳಿಯಿತು. ಅಂತಿಮ ನಮನ ಸಲ್ಲಿಸಲು ಬಂದಿದ್ದೇನೆ. ಮೈಸೂರಿಗೆ ಏಕೆ ಪಾರ್ಥವ ಶರೀರ ತಂದಿದ್ದಾರೆ ಎಂದು ತಿಳಿದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ