ಮೈಸೂರು: ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಇಂದು ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನು ವಿತರಣೆ ಮಾಡುವ ಮೂಲಕ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮಾಡಲಾಯಿತು.
ಆಯುರ್ವೇದ ಸಸ್ಯಗಳಾದ ಅಮೃತ ಬಳ್ಳಿ, ಕೃಷ್ಣ ತುಳಸಿ, ರಾಮ ತುಳಸಿ, ಬೆಟ್ಟದ ನೆಲ್ಲಿಕಾಯಿ, ದೊಡ್ಡಿಪತ್ರೆ, ಅಗಸೆ ಗಿಡ, ನೇರಳೆ ಗಿಡ, ಬೇವಿನ ಗಿಡ, ಅರಿಶಿನ ಗಿಡ ಸೇರಿದಂತೆ ಇನ್ನಿತರ ಔಷಧೀಯ ಗಿಡಗಳನ್ನು ವಿತರಿಸಲಾಯಿತು
ಈ ಸಂದರ್ಭದಲ್ಲಿ ಆಯುರ್ವೇದ ಹಿರಿಯ ವೈದ್ಯ ಡಾ.ಚಂದ್ರಶೇಖರ್ ಅವರು ಮಾತನಾಡಿ, “ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ, ಆಯುರ್ವೇದ ಆಹಾರ ಕ್ರಮಗಳು ಅಗತ್ಯ. ಆಯುರ್ವೇದ ವೈದ್ಯ ಪದ್ಧತಿ ಕಾಯಿಲೆ ಗುಣಪಡಿಸುವ ಜೊತೆಗೆ ಆರೋಗ್ಯಯುತ ಜೀವನ ನಡೆಸುವ ಕ್ರಮವನ್ನು ಕಲಿಸುತ್ತದೆ. ಆಯುರ್ವೇದದ ಬಗ್ಗೆ ಜನರಿಗೆ ತಿಳುವಳಿಕೆ ಬರಲು ಹೆಚ್ಚಿನ ಪ್ರಚಾರದ ಅಗತ್ಯ ಇದೆ” ಎಂದು ತಿಳಿಸಿದರು.
“ಆಯುರ್ವೇದ ಎಂಬುದು ಭಾರತಕ್ಕೆ ಸಿಕ್ಕಿರುವ ಕೊಡುಗೆ. ಇದು ಒರಿಜಿನಲ್ ಥೆರಪಿ. ಆಧ್ಯಾತ್ಮಿಕ ವಿದ್ಯೆ. ಇದನ್ನು ಆದಿ ಭೌತಿಕವಾಗಿ ಹೇಗೆ ಉಪಯೋಗಿಸಿಕೊಳ್ಳಬೇಕು ಎಂಬುದನ್ನು ನಾವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳಬೇಕಾಗುತ್ತದೆ. ಇದು ಅನೇಕ ಋಷಿಮುನಿಗಳ ಕೊಡುಗೆ” ಎಂದು ಹೇಳಿದರು.
Laxmi News 24×7