Home / ಜಿಲ್ಲೆ / ಬೆಂಗಳೂರು / ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕ

ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕ

Spread the love

ಬೆಂಗಳೂರು, ಡಿ.28- ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.  ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ನಡೆದಿದೆ.  ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಟಿದ್ದಾರೆ.

ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್-19 ನಿಯಮಾನುಸಾರ ನಡೆಯಲಿದೆ.ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು , ಅಂದು ಚಿತ್ರರಂಗ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗಿತ್ತು.ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ಕರ್ನಾಟಕದ ಜನತೆ, ಚಿತ್ರರಸಿಕರು ಹಾಗೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ. ನಿಮ್ಮ ಪ್ರೀತಿಯ ಆಶೀರ್ವಾದ ಮಧುಮಕ್ಕಳ ಮೇಲೆ ಸದಾ ಇರಲಿ ಎಂದು ರಮೇಶ್ ಅರವಿಂದ್ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ