Breaking News

ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಣೆಬರಹ ಗೊತ್ತಾಗಲಿದೆ.

Spread the love

ಬೆಂಗಳೂರು: ಮುಂದಿನ ರಾಜಕೀಯ ದಿಗ್ಸೂಚಿ ಎಂದು ಪರಿಗಣಿಸಲಾದ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದೇ ತಿಂಗಳಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆದಿದ್ದು, ಇಂದು (ಡಿ.30) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಸಂಜೆಯ ವೇಳೆಗೆ ಅಂತಿಮ ಫಲಿತಾಂಶ ಸಿಗುವ ನಿರೀಕ್ಷೆ ಇದೆ. ನಮ್ಮ ನ್ಯೂಸ್18 ಕನ್ನಡದ ವೆಬ್​ಸೈಟ್​ನಲ್ಲಿ ನೀವು ಕ್ಷಣಕ್ಷಣಕ್ಕೂ ಕರಾರುವಾಕ್ ಫಲಿತಾಂಶದ ವಿವರವನ್ನು ಪಡೆಯಬಹುದಾಗಿದೆ. ಹಾಗೆಯೇ, ಸರ್ಕಾರ ಮತ್ತು ಚುನಾವಣಾ ಆಯೋಗದ  https://karsec.gov.in/Home.aspx ಮತ್ತು https://www.ceokarnataka.kar.nic.in/ ಅಧಿಕೃತ ಜಾಲತಾಣಗಳಲ್ಲೂ ವೀಕ್ಷಿಸಬಹುದಾಗಿದೆ.

ರಾಜ್ಯದ 72 ಸಾವಿರಕ್ಕೂ ಹೆಚ್ಚು ಗ್ರಾಮಗಳ 6,004 ಗ್ರಾಮ ಪಂಚಾಯಿತಿಗಳ ಪೈಕಿ 5,728 ಗ್ರಾ.ಪಂ.ಗಳ 82,616 ಸ್ಥಾನಗಳಿಗೆ ಡಿ. 22 ಮತ್ತು 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. 242 ಗ್ರಾ.ಪಂ.ಗಳಿಗೆ ಮತದಾನ ಬಹಿಷ್ಕಾರ ಮತ್ತಿತರ ಕಾರಣದಿಂದ ಚುನಾವಣೆ ನಡೆಯಲಿಲ್ಲ. ಸುಮಾರು 8,074 ಗ್ರಾಮಗಳಲ್ಲಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗವು ಪಕ್ಷಾತೀತವಾಗಿ ಚುನಾವಣೆ ನಡೆಸಿದೆಯಾದರೂ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ವಿವಿಧ ಅಭ್ಯರ್ಥಿಗಳನ್ನ ಬೆಂಬಲಿಸಿರುವುದರಿಂದ ರಾಜಕೀಯ ಜಿದ್ದಾಜಿದ್ದಿ ಜೋರಾಗಿದೆ. ಹೀಗಾಗಿ, ಮೂರೂ ಪಕ್ಷಗಳಿಗೆ ಈ ಪಂಚಾಯಿತಿ ಚುನಾವಣೆ ಪ್ರತಿಷ್ಠೆಯ ಪಣವಾಗಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ