Breaking News

ಕಾಗಿನೆಲೆಯಲ್ಲಿ ಪ್ರತಿವರ್ಷ ಕನಕ ಉತ್ಸವ ಆಚರಿಸಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬೆಂಗಳೂರು: ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಪ್ರತಿವರ್ಷ ಕನಕ ಉತ್ಸವ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಇನ್ಮುಂದೆ ಪ್ರತಿವರ್ಷ ಕನಕ ಉತ್ಸವ ಆಚರಿಸಬೇಕು. ಉತ್ಸವದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದರು. ಈ ವೇಳೆ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದರು.

ಕನಕದಾಸರ ಕರ್ಮಭೂಮಿ, ಜನ್ಮಭೂಮಿ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಹಾವೇರಿ ಜಿಲ್ಲೆಯ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರಗಳಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.

ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿಯ ಕಾಂತೇಶ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ