Breaking News

ಗೋವಾದಲ್ಲಿ ಎಮ್ಮೆಗೆ ಡಿಕ್ಕಿಯಾದ ಕಾರವಾರದ ವೈದ್ಯ ವಿದ್ಯಾರ್ಥಿಗಳ ಬೈಕ್: ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

Spread the love

ಕಾರವಾರ: ಗೋವಾಗೆ ತೆರಳಿ ಅಲ್ಲಿಂದ ವಾಪಸಾಗುತ್ತಿದ್ದ ಕಾರವಾರದ ಕ್ರಿಮ್ಸ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಎಮ್ಮೆಯೊಂದು ಅಡ್ಡಬಂದ ಪರಿಣಾಮ ರಸ್ತೆಗೆ ಬಿದ್ದು ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಗೋವಾದ ಮಾಷೆಂ ಬಳಿ ನಡೆದಿದೆ.

ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಮೃತ ವಿದ್ಯಾರ್ಥಿಯನ್ನು ಕ್ರಿಮ್ಸ್ ಎಂಬಿಬಿಎಸ್ ಮೂರನೇ ವರ್ಷದ ಆದರ್ಶ ಪುಜಾರಿ (23) ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ರೌನಕ್ ಚಾವ್ಲಾ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಂಗಳವಾರ ರಾತ್ರಿ ಇಬ್ಬರೂ ಕಾಣಕೋಣದಿಂದ ಕಾರವಾರದತ್ತ ರಾಯಲ್ ಎನ್‌ಫೀಲ್ಡ್ (GA 49 EC 2998) ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಮಾಷೆಂ ಹತ್ತಿರದ ರಸ್ತೆಯಲ್ಲಿ ಏಕಾಏಕಿ ಎಮ್ಮೆ ಅಡ್ಡ ಬಂದ ಪರಿಣಾಮ ಬೈಕ್ ಸ್ಲಿಪ್ ಆಗಿ ಇಬ್ಬರೂ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರ ನೆರವಿನಿಂದ ಅವರನ್ನು ತಕ್ಷಣವೇ ಕಾಣಕೋಣ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಸಾಗಿಸಲಾಯಿತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಮೆಡಿಕಲ್​ ವಿದ್ಯಾರ್ಥಿ ಆದರ್ಶ ಪುಜಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇಬ್ಬರು ವಿದ್ಯಾರ್ಥಿಗಳು ಮಂಗಳವಾರ ರಾತ್ರಿ ಕಾರವಾರದಿಂದ ಕಾಣಕೋಣಕ್ಕೆ ಊಟಕ್ಕೆ ತೆರಳಿ, ಹಿಂತಿರುಗುವಾಗ ಅಪಘಾತ ಸಂಭವಿಸಿದೆ.

ಮೃತ ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಗಾಯಾಳು ರೌನಕ್ ಚಾವ್ಲಾವನ್ನು ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಡ್ ಕಾನ್ಸ್‌ಟೇಬಲ್ ಆನಂದ ಕುಶಾಳಿ ಪಾಗಿ ಹಾಗೂ ಸಿಬ್ಬಂದಿ ತೆರಳಿ ಸ್ಥಳ ಪರಿಶೀಲನೆ ನಡೆಸಿದರು. ರಸ್ತೆ ಬದಿಯಲ್ಲಿ ಬೈಕ್ ಹಾಗೂ ಸತ್ತ ಎಮ್ಮೆ ಪತ್ತೆಯಾಗಿದ್ದು, ಕಾಣಕೋಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ