Breaking News

ಸುರಂಗ ರಸ್ತೆ ಬದಲು ಮೆಟ್ರೋ ವಿಸ್ತರಣೆ, ಸಾರ್ವಜನಿಕ ಸಾರಿಗೆಗೆ ಆದ್ಯತೆಯಿಂದ ಮಾತ್ರ ಸಂಚಾರದಟ್ಟಣೆ ತಹಬದಿಗೆ: ಸಂಸದ ತೇಜಸ್ವಿ ಸೂರ್ಯ

Spread the love

ಬೆಂಗಳೂರು: 18 ಕಿಲೋ ಮೀಟರ್​ ಉದ್ದದ ಸುರಂಗ ಮಾರ್ಗ ರಸ್ತೆ ನಿರ್ಮಾಣದಿಂದ ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆ ಹೇಗೆ ಸಾಧ್ಯ. ಪೂರ್ವ ಸಿದ್ಧತೆ ನಡೆಸದೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸಾರ್ವಜನಿಕರ ಹಣ ಪೋಲು ಮಾಡುವ ಬದಲು ಸಮೂಹ ಸಾರಿಗೆಗೆ ಆದ್ಯತೆ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಸುರಂಗ ರಸ್ತೆ ನಿರ್ಮಾಣದಿಂದಾಗಿ ಎದುರಾಗುವ ತೊಡಕುಗಳು ಹಾಗೂ ಸಂಚಾರ ದಟ್ಟಣೆ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಬಳಿಕ ಮಾತನಾಡಿದ ಅವರು, 18 ಕಿ. ಮೀ. ಸುರಂಗ ಮಾರ್ಗ ರಚನೆಯಿಂದ ಬೆಂಗಳೂರಿನ ಎಲ್ಲಾ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಹೇಗೆ ಸಾಧ್ಯ? ದುರಂತ ನಿಭಾಯಿಸುವುದು ಹೇಗೆ? ಸಾರಿಗೆ ಸಾಧ್ಯತೆ ಕುರಿತು ಅಧ್ಯಯನ ನಡೆದಿಲ್ಲ; ತಜ್ಞರು ಹೇಳಿದ್ದನ್ನೂ ಕೇಳುತ್ತಿಲ್ಲ ಎಂದು ಆಕ್ಷೇಪಿಸಿದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ