Breaking News

ಲಿಂಗಾಯತರ ಬಗ್ಗೆ ಅವಹೇಳನಕಾರಿ ಮಾತು: ಕನೇರಿ ಸ್ವಾಮೀಜಿ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

Spread the love

ಬೆಂಗಳೂರು, (ಅಕ್ಟೋಬರ್ 31): ಲಿಂಗಾಯತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ (kaneri math kadasiddeshwara swamiji) ಕೋರ್ಟ್ ಮಧ್ಯಂತರ ನಿರ್ಬಂಧಕಾಜ್ಞೆ​ ವಿಧಿಸಿದೆ. ಮಹಾರಾಷ್ಟ್ರದಲ್ಲಿ ಲಿಂಗಾಯತ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಲಿಂಗಾಯತ ಮಠಗಳ ಒಕ್ಕೂಟ ದಾಖಲಿಸಿದ ಮಾನನಷ್ಟ ಮೊಕ್ಕದಮೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 31ನೇ ಸಿಸಿಹೆಚ್ ಕೋರ್ಟ್, ಅವಹೇಳನಕಾರಿ ಹೇಳಿಕೆ ನೀಡದಂತೆ ಕಾಡಸಿದ್ದೇಶ್ವರ ಸ್ವಾಮೀಜಿಗೆ ನಿರ್ಬಂಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.ಅವಹೇಳನಕಾರಿ ಹೇಳಿಕೆ ಖಂಡಿಸಿ ಲಿಂಗಾಯತ ಮಠಗಳ ಒಕ್ಕೂಟವು, ಸ್ವಾಮೀಜಿ ವಿರುದ್ಧ 1 ಕೋಟಿ ರೂ. ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಅಶ್ಲೀಲ ಪದ ಪ್ರಯೋಗಿಸಿ ಲಿಂಗಾಯತ ಮತಗಳ ಒಕ್ಕೂಟಕ್ಕೆ ತೆಗಳಿದ್ದಾರೆ. ಸ್ವಾಮೀಜಿ ಹೇಳಿಕೆಯಿಂದ ಲಿಂಗಾಯತ ಮಠಗಳ ಒಕ್ಕೂಟದ ಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಹೇಳಿಕೆ ನೀಡದಂತೆ ಸ್ವಾಮೀಜಿಗೆ ನಿರ್ಬಂಧ ವಿಧಿಸುವಂತೆ ಮನವಿ ಮಾಡಿತ್ತು. ಈ ಪ್ರಕರಣ ಸಂಬಂಧ ಒಕ್ಕೂಟದ ಪರವಾಗಿ ವಕೀಲೆ ವಿಜೇತಾ ಆರ್. ನಾಯ್ಕ್ ವಾದ ಮಂಡಿಸಿದರು. ಈ ವಾದ ಆಲಿಸಿದ ಬೆಂಗಳೂರಿನ 31 ನೇ ಸಿಸಿಹೆಚ್ ಕೋರ್ಟ್, ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಿಸಿ ಮಧ್ಯಂತರ ಆದೇಶಿಸಿದ್ದು, ಈ ಬಗ್ಗೆ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ