Breaking News

ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ

Spread the love

ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದೆ. ನಂತರ ನಡೆದ ಪಥಸಂಚಲನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿ, ಕನ್ನಡದ ವೈಭವ, ಏಕತೆ ಮತ್ತು ಗೌರವವನ್ನು ಹೊಳೆಯುವ ರಾಜ್ಯೋತ್ಸವದ ಸಂದೇಶವನ್ನು ಜನತೆಗೆ ನೀಡಿದರು.

 

ಈ ವೇಳೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎಲ್ಲಾ ಪುರಸ್ಕೃತರನ್ನು ಸನ್ಮಾನಿಸಿ, ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

 

ಈ ಸಂದರ್ಭದಲ್ಲಿ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಜಿ.ಪಂ. ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠರು ಭೀಮಾಶಂಕರ ಗುಳೇದ್, ಬೆಳಗಾವಿ ನಗರ ಎಸ್.ಪಿ. ಬೊರಸೆ ಭೂಷಣ್ ಗುಲಾಬರಾಬ್ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

#satishjarkiholi #ಕನ್ನಡರಾಜ್ಯೋತ್ಸವ #ಬೆಳಗಾವಿ

#KannadaRajyotsava2025


Spread the love

About Laxminews 24x7

Check Also

ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ.

Spread the loveಚಿಕ್ಕೋಡಿ : ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ