ಕರ್ನಾಟಕ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ ಮೊದಲು ಅನುಮತಿ ಕೊಡುತ್ತಿದ್ದ ಜಿಲ್ಲಾಡಳಿತದ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ಈಗ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ ತೆಗೆದುಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ.
ಕರಾಳ ದಿನಾಚರಣೆಯ ಬಂದೋಬಸ್ತಕ್ಕೆ ಹೋಗಿದ್ದ ಸಿಪಿಐ ಜೆ.ಎಂ.ಕಾಲೆಮಿರ್ಚೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆ ಜೊತೆಗೆ ಸಲುಗೆಯಿಂದ ಮಾತನಾಡಿಸಿ ಕೊನೆಗೆ ಹೋಗುವಾಗ ತಮ್ಮ ಮೊಬೈಲ್ ತೆಗೆದುಕೊಂಡು ನಾನೇ ಇವರೊಂದಿಗೆ ಸೆಲ್ಪಿ ತೆಗೆದುಕೊಳ್ಳುತ್ತೇನೆ ಎಂದಿರುವುದು ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7