Breaking News

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ.

Spread the love

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ.
ಇಡೀ ರಾಜ್ಯ ರಾಜ್ಯೋತ್ಸವದ ಸಂಭ್ರಮದಲ್ಲಿರುವಾಗಲೇ ಗಡಿ ನಾಡು ಬೆಳಗಾವಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ನಡೆಯುವಾಗ ಐವರಿಗೆ ಚಾku ಇರಿಯಲಾಗಿದೆ. ಇವರನ್ನು ಸ್ಥಳೀಯ ಬಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ‌ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು.
ಈ ಮೆರವಣೆಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಯದ್ವತದ್ವಾ ಚಾಕು ಇರಿದು ಪರಾರಿಯಾಗಿದ್ದಾರೆ. ಚಾku ,ಜಂಬೆ ಸಮೇತ ಆಗಮಿಸಿ ಐವರ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ಹಾಗೂ ವಿನಾಯಕಗೆ ಚಾಕು ಇರಿಯಲಾಗಿದೆ. ಬೆಳಗಾವಿಯ ‌ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.
ಚಾಕು ಇರಿತವಾದ ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರ ಕೂಡ ಮಾಡಿದ್ದಾರೆ.
ಬೆಳಗಾವಿಯಲ್ಲಿ ಇಂಥ ಘಟನೆ ಮೊದಲಲ್ಲ
ರಾಜ್ಯೋತ್ಸವ ಸಂದರ್ಭದಲ್ಲಿ ಚಾಕು ಇರಿತ ಪ್ರಕರಣ ಆಗಿರುವುದ ಇದೇ ಮೊದಲೇನಲ್ಲ. 2022ರಲ್ಲಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ (Kannada Rajyotsava) ಮೆರವಣಿಗೆಯಲ್ಲಿ ಗುಂಪು ಘರ್ಷಣೆಯಾಗಿದ್ದು, ಈ ವೇಳೆ ಓರ್ವ ಯುವಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು
ಯುವಕರ ಗುಂಪುಗಳ ನಡುವೆ ಜಗಳದಲ್ಲಿ ಚೇತನ್‌ ಎನ್ನುವ ಯುವಕನಿಗೆ ಚಾಕು ಇರಿಯಲಾಗಿತ್ತು.ಗಲಾಟೆಯಲ್ಲಿ ಅಶೋಕ ಸಿಂಧೂರೆ, ವಿಕಾಸ ಸುಣಗಾರ ಎನ್ನುವವರು ಗಾಯಗೊಂಡಿದ್ದರು.
ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ತಳ್ಳಿದರು ಎಂಬ ಕಾರಣಕ್ಕೆ ಯುವಕರ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಅದು ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಈ ಗಲಾಟೆ ಮಧ್ಯೆ ದುಷ್ಕರ್ಮಿಗಳು ಚೇತನ ಹಡಪದ ಎಂಬ ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದರು. ಮೋಶೀನ್​ ಗ್ಯಾಂಗ್‌ನಿಂದ ಹಲ್ಲೆ ಹಾಗೂ ಚಾಕು ಇರಿದಿರುವ ಆರೋಪ ಕೇಳಿ ಬಂದಿತ

Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ