Breaking News

ಇಬ್ಬರ ಬಲಿ ಪಡೆದ ಕಾಡಾನೆ ಸೆರೆ ಹಿಡಿಯಲು ಶೃಂಗೇರಿಗೆ ಆಗಮಿಸಿದ 6 ಸಾಕಾನೆಗಳು

Spread the love

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಆನೆ ಸೆರೆ ಕಾರ್ಯಾಚರಣೆಗೆ ಸಾಕಾನೆಗಳಾದ ಏಕಲವ್ಯ, ಧನಂಜಯ, ಪ್ರಶಾಂತ, ಹರ್ಷ ಸೇರಿ ಆರು ಆನೆಗಳನ್ನು ಶೃಂಗೇರಿ ತಾಲೂಕಿನ ಕೆರೆಕಟ್ಟೆ ಚೆಕ್‌ಪೋಸ್ಟ್​ಗೆ ಕರೆತರಲಾಗಿದೆ. ನಾಳೆಯಿಂದ ಒಂಟಿ ಸಲಗದ ಸೆರೆ ಕಾರ್ಯಾಚರಣೆ ಪ್ರಾರಂಭವಾಗಲಿದೆ.

ಕಾಡಾನೆ ಕೆರೆಮನೆ ಗ್ರಾಮದ ಸುತ್ತಮುತ್ತ ರೈತರಿಗೆ ಹಾಗೂ ವಾಹನ ಸವಾರರಿಗೆ ಕಾಣಿಸಿಕೊಳ್ಳುತ್ತಿದ್ದು, ಸಿಕ್ಕ ಸಿಕ್ಕ ಜಮೀನು, ತೋಟಗಳಿಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಶನಿವಾರ ರೈತರಿಗೆ ಕಾಡಾನೆ ಕಾಣಿಸಿಕೊಂಡು, ಅಡಿಕೆ ತೋಟ ನಾಶಮಾಡಿತ್ತು.

ಕಾಡಾನೆ ದಾಳಿಯಿಂದ ಮೃತಪಟ್ಟ ಹರೀಶ್ ಮತ್ತು ಉಮೇಶ್ ಅವರ ಮನೆಗೆ ಶನಿವಾರ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ 5 ಲಕ್ಷ ರೂ. ಸಹಾಯ ಘೋಷಿಸಿದ್ದರು. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ತಲಾ ಒಂದು ಲಕ್ಷ ಧನಸಹಾಯ ಮಾಡಿದ್ದರು. ಇಬ್ಬರನ್ನು ಕೊಂದ ಕಾಡಾನೆಯನ್ನು ಅದಷ್ಟು ಬೇಗ ಸೆರೆ ಹಿಡಿಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದರು.

ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಮನೆ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿತ್ತು. ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದ ಸಂದರ್ಭದಲ್ಲಿ ಮೊದಲು ವ್ಯಕ್ತಿಯೊಬ್ಬನ ಮೇಲೆ ಆನೆ ದಾಳಿ ಮಾಡಿದೆ. ಮನೆಯಿಂದ ಸ್ವಲ್ಪ ದೂರದಲ್ಲಿ ನಾಯಿ ಏಕೆ ಬೊಗಳುತ್ತಿದೆ ಎಂದು ನೋಡಲು ಹೋಗಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೂ ಆನೆ ದಾಳಿ ಮಾಡಿ ಕೊಂದು ಹಾಕಿತ್ತು. ಹರೀಶ್ ಹಾಗೂ ಉಮೇಶ್ ಆನೆ ದಾಳಿಗೆ ಪ್ರಾಣ ಕಳೆದುಕೊಂಡವರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ