Breaking News

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the love

ಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ಬಾಲಕಿಯರಿಗಾಗಿ ಹುಡುಕಾಟ ಮುಂದುವರೆದಿದೆ.

ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿ ಹಾಗೂ ಓರ್ವ ಬಾಲಕನನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಫ್ರಿನ್​ (13) ಮೃತಪಟ್ಟಿದ್ದಾಳೆ. ಆಯಿಷಾ ಮೃತದೇಹ ನಿನ್ನೆಯೇ ಸಿಕ್ಕಿದ್ದು, ಹನಿ (14) ಮೃತದೇಹ ಇಂದು ಪತ್ತೆಯಾಗಿದೆ. ನಾಪತ್ತೆಯಾಗಿರುವ ಆಲ್ಫಿಯಾ ಹಾಗೂ ಥರ್ಬಿಮ್ (13)ಗಾಗಿ ಹುಡುಕಾಟ ನಡೆದಿದೆ. ನೀರುಪಾಲಾಗಿರುವ ಆ ಮಕ್ಕಳ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ವಿವರ: ಮೈಸೂರಿನ ಶಾಂತಿನಗರದ ಮದರಸದಿಂದ 15 ಮಕ್ಕಳು ಹಾಗೂ ಮೂವರು ಸಿಬ್ಬಂದಿ ಪ್ರವಾಸಕ್ಕೆ ಬಂದಿದ್ದರು. ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿಯ ನಾಲೆಯಲ್ಲಿ ಈ ಅವಘಡ ಸಂಭವಿಸಿದೆ. ನಾಲೆಯಲ್ಲಿ ಇಳಿದು ಆಟವಾಡಲು ಮಕ್ಕಳು ಮುಂದಾಗಿದ್ದರು. ಈ ವೇಳೆ ನೀರಿನ ರಭಸಕ್ಕೆ ಮಕ್ಕಳು ಕೊಚ್ಚಿ ಹೋಗಿದ್ದಾರೆ.

ನಿನ್ನೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಓರ್ವ ಬಾಲಕಿ ಹಾಗೂ ಬಾಲಕನನ್ನು ರಕ್ಷಣೆ ಮಾಡಿ ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆಕೆ ಸಾವನಪ್ಪಿದ್ದಾಳೆ. ಬಾಲಕ ಮಹಮ್ಮದ್​ ಗೌಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ

Spread the loveಬೆಂಗಳೂರು: ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಪ್ರವಾಹ ಉಂಟಾಗಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ 1545.23 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ