Breaking News

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the love

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ ತರಿಸಿದೆ. ಈ ಘಟನೆ ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್ ಅವರು, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರೊಂದಿಗೆ ಇಂದು ಮೃತ ಹರೀಶ್ ಮತ್ತು ಉಮೇಶ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸಚಿವ ಜಾರ್ಜ್ ಅವರು ವೈಯಕ್ತಿಕವಾಗಿ ತಲಾ 5 ಲಕ್ಷ ರೂ. ಸಹಾಯಧನ ವಿತರಿಸಿದರು. ಜೊತೆಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಹಾಯ ಕೊಡಿಸುವುದಾಗಿ ಭರವಸೆ ನೀಡಿದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಎಸ್​ಪಿ ವಿಕ್ರಮ್ ಅಮಟೆ ಸಹ ಸಚಿವರೊಂದಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತುಂಬಿದರು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ.

ಘಟನೆಯ ಬಳಿಕವೂ ಕೆರೆಮನೆ ಗ್ರಾಮದ ಸುತ್ತಮುತ್ತ ಅದೇ ಒಂಟಿ ಸಲಗ ಸಂಚರಿಸುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದರು. ಆನೆಯನ್ನ ಸೆರೆಹಿಡಿಯಲು ಅರಣ್ಯ ಇಲಾಖೆ ಈಗಾಗಲೇ ಆದೇಶ ನೀಡಿದ್ದು, ಶೀಘ್ರದಲ್ಲೇ ಆನೆಯನ್ನು ಪತ್ತೆಹಚ್ಚಿ ಸೆರೆ ಹಿಡಿಯುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಇಂದು ಮತ್ತೊಮ್ಮೆ ಶೃಂಗೇರಿಯ ಬೇರೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡು ಅಡಿಕೆ ತೋಟವನ್ನು ಸಂಪೂರ್ಣ ನಾಶ ಮಾಡಿ ಹೋಗಿದ್ದು, ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿ ಆನೆ ಸೆರೆ ಹಿಡಿಯಲು ನಿಗಾ ಇಟ್ಟಿದ್ದಾರೆ. ನಿರಂತರವಾಗಿ ರಸ್ತೆಗಳು ಹಾಗೂ ತೋಟಗಳಲ್ಲಿ ಕಾಡಾನೆ ಸಂಚಾರ ಮಾಡುತ್ತಿರುವ ಬೆನ್ನಲ್ಲೇ ಮನೆಯಿಂದ ಹೊರಬರುವುದಕ್ಕೂ ಗ್ರಾಮಸ್ಥರು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಯನ್ನು ಸೆರೆ ಹಿಡಿಯುವ ಭರವಸೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಸ್ಥಳೀಯರಿಗೆ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ