Breaking News

ಕಬ್ಬು ಬೆಳೆಗಾರರ ಜೊತೆಗಿನ ಡಿಸಿ ಸಂಧಾನ ವಿಫಲ: ಪ್ರತಿಭಟನೆ ಮುಂದುವರಿಸಿದ ಬೆಳಗಾವಿ ರೈತರು

Spread the love

ಚಿಕ್ಕೋಡಿ(ಬೆಳಗಾವಿ): ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಗುರ್ಲಾಪುರ್ ಕ್ರಾಸ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಎಸ್​ಪಿ ಅವರ ನೇತೃತ್ವದಲ್ಲಿ ಹೋರಾಟಗಾರರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಎನ್ನದೆ ಬೃಹತ್ ಪ್ರಮಾಣದ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದೆ. ಹೀಗಾಗಿ ನಿನ್ನೆ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಮತ್ತು ಎಸ್​ಪಿ ಭೀಮಾಶಂಕರ್ ಗುಳೇದ್ ರೈತರು ಹಾಗೂ ರೈತ ಮುಖಂಡರ ಜೊತೆ ಸಂಧಾನ ಸಭೆ ನಡೆಸಿದರು.

ಈ ಕುರಿತಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ರೈತರು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೃಹತ್ ಹೋರಾಟ ಮಾಡಿಕೊಂಡು ಬಂದಿದ್ದಾರೆ. ರೈತರ ಏಳಿಗೆಗಾಗಿ ನಾನು ಶ್ರಮಿಸುತ್ತೇನೆ. ಕಾರ್ಖಾನೆ ಮಾಲೀಕರ ಜೊತೆಗೆ ಸಭೆ ನಡೆಸಲಾಗಿತ್ತು. ಆದರೆ ಕಾರ್ಖಾನೆ ಮಾಲೀಕರು 3,200 ರೂ. ಕೊಡುವುದಾಗಿ ಒಪ್ಪಿಕೊಂಡಿದ್ದಾರೆ. ನಿಮ್ಮ ಜೊತೆ ನಾನು ನಿರಂತರವಾಗಿ ಇರುತ್ತೇನೆ. ನಿಮ್ಮ ಬೇಡಿಕೆಗೆ ನಾನು ಸ್ಪಂದನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ರೈತರು ಬೀದಿಯಲ್ಲಿ ಕೂರಬಾರದು. ನಾನು ರೈತ ಸ್ನೇಹಿ ಅಧಿಕಾರಿಯಾಗಿ ನಿಮಗೆ ಮನವಿ ಮಾಡಿಕೊಳ್ಳುತ್ತೇನೆ. ನೀವು ಈ ಪ್ರತಿಭಟನೆಯನ್ನು ಕೈ ಬಿಡಿ, ನಾನು ನಿಮ್ಮ ಜೊತೆ ಇರುತ್ತೇನೆ ಎಂದು ಮನವೊಲಿಸಲು ಪ್ರಯತ್ನಿಸಿದರು.

ಈ ಹಿಂದೆ ಕೂಡ ತೂಕದಲ್ಲಿ ಕೆಲವು ಕಾರ್ಖಾನೆಗಳು ಮೋಸ ಮಾಡುತ್ತವೆ ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ನನಗೆ ವಿಸ್ತೃತವಾಗಿ ಮಾಹಿತಿ ನೀಡಿದ್ದರು. ತಕ್ಷಣವೇ ನಾನು ಜಿಲ್ಲಾಡಳಿತದಿಂದ ಓರ್ವ ಅಧಿಕಾರಿಯನ್ನು ನೇಮಿಸಿ ತೂಕದ ಮಷಿನ್​ಗಳನ್ನು ಪರಿಶೀಲನೆ ಮಾಡಿಸಿದ್ದೆ. ಬೆಳಗಾವಿಯಲ್ಲಿ ರೈತರ ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದನೆ ನೀಡಿದೆ, ನೀವು ಈ ಪ್ರತಿಭಟನೆಯನ್ನು ಕೈ ಬಿಡಬೇಕೆಂದು ರೈತರಿಗೆ ಡಿಸಿ ಮನವಿ ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ