ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು
ವಿಜಯಪುರದ ಆನಂದನಗರದಲ್ಲಿರುವ ಶ್ರೀ ದಾನಮ್ಮದೇವಿ ದೇವಸ್ಥಾನದ 15ನೇ ವರ್ಷದ ಜಾತ್ರಾ ಮಹೋತ್ಸವವು ಭಕ್ತಿಯ ಮತ್ತು ಭಾವಭರವೆಯ ವಾತಾವರಣದಲ್ಲಿ ನಡೆಯತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭಾಗವಹಿಸಿ, ದಾನಮ್ಮದೇವಿ ಆಶಿರ್ವಾದ ಪಡೆದರು. ಈ ಮಹೋತ್ಸವದಲ್ಲಿ ಶ್ರೀ ಮ.ನಿ.ಪ್ರ. ಸ್ವಾಮೀಜಿ ಗುರು ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು (ಅನ್ನದಾನಿಶ್ವರ ದೇವಮಂದಿರ, ಮಹಾಮಠ, ಸುಕ್ಷೇತ್ರ ಮಣಕವಾಡ–ಹಿರೇವಡ್ಡಟ್ಟಿ) ಅವರ ದಿವ್ಯ ಸಾನಿಧ್ಯದಲ್ಲಿ ಸಚಿವ ಎಂ.ಬಿ.ಪಾಟೀಲ ಪ್ರವಚನ ಆಲಿಸಿದರು. ಬಳಿಕ ಮಾತನಾಡಿದ ಸಚಿವರು ಸ್ವಾಮೀಜಿಯವರ ಆಗಮನದಿಂದ ಭಕ್ತರಲ್ಲಿ ಉತ್ಸಾಹ ಹೆಚ್ಚಾಗಿದ್ದು,
ಅವರು ಮಾತೆ ದಾನಮ್ಮದೇವಿಯ ದರ್ಶನ ಪಡೆದು ದೇವಿಯ ಕೃಪೆ ಹಾಗೂ ಆಶೀರ್ವಾದ ಎಲ್ಲರ ಮೇಲೂ ಇರಲೆಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಭಕ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಭಾವದಿಂದ ಪೂಜೆ-ಪಾಠಗಳಲ್ಲಿ ತೊಡಗಿದ್ದರು. ದೇವಾಲಯ ಆವರಣದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.
Laxmi News 24×7