Breaking News

: ಸಾವಿನಲ್ಲೂ ಒಂದಾದ ದಂಪತಿ

Spread the love

ಬಾಗಲಕೋಟೆ: ಗಂಡ ಹೃದಯಘಾತವಾಗಿ ಮೃತಪಟ್ಟ ಸುದ್ದಿ ಕೇಳಿ ಹೆಂಡತಿಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಈ ಮೂಲಕ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ಶಶಿಧರ ಪತ್ತಾರ(40) ಎಂಬವರಿಗೆ ಸೋಮವಾರ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಾವಿನ ಸುದ್ದಿ ತಿಳಿದ ತಕ್ಷಣ ಆಘಾತಕ್ಕೆ ಹೆಂಡತಿಯೂ ಹೃದಯಾಘಾತಗೊಂಡು ಸಾವನ್ನಪ್ಪಿದ್ದಾರೆ. ಪತ್ನಿ ಸರೋಜಾ (35) ಹೃದಯಾಘಾತಗೊಂಡು ಸಾವನ್ನಪ್ಪಿದವರು.

ಹದಿನೈದು ವರ್ಷಗಳ ಹಿಂದೆ ಇಬ್ಬರಿಗೂ ಮದುವೆಯಾಗಿತ್ತು. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ. ಒಂದೇ ಸಮಯದಲ್ಲಿ ಗಂಡ ಹೆಂಡತಿ ಮೃತಪಟ್ಟಿರುವುದು, ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಶಶಿಧರ್​ ಅವರು ಜೀವನೋಪಾಯಕ್ಕಾಗಿ ಚಿನ್ನದ ಅಂಗಡಿ ನಡೆಸುತ್ತಿದ್ದರು. ಅವರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿದ್ದವು ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ