Breaking News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂ​ಗೆ ಪವಿತ್ರಾಗೌಡ ಅರ್ಜಿ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ, ರದ್ದುಗೊಂಡಿರುವ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆಗಸ್ಟ್ 14 ರಂದು ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಅಂದಿನಿಂದ ಏಳು ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ಧಾರೆ. ಸೋಮವಾರ 17 ಮಂದಿ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಮುಕ್ತಾಯಗೊಂಡಿತ್ತು. ಈ ಮಧ್ಯೆ ಜಾಮೀನು ಅರ್ಜಿ ಆದೇಶವನ್ನ ಪರಿಶೀಲಿಸಬೇಕೆಂದು ಕೋರಿ ಪವಿತ್ರಾಗೌಡ ಅರ್ಜಿ ಸಲ್ಲಿಸಿದ್ದು, ನಾಳೆ (ಗುರುವಾರ) ವಿಚಾರಣೆಗೆ ಬರಲಿದೆ.

ಜಾಮೀನು ರದ್ದು ಆದೇಶದಲ್ಲಿ ಕೆಲ ತಪ್ಪುಗಳಿವೆ. ಮತ್ತೊಮ್ಮೆ ಪರಿಶೀಲಿಸಿ ಜಾಮೀನು ನೀಡುವಂತೆ ಪವಿತ್ರಾಗೌಡ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳ ವಿಚಾರಣೆಯನ್ನು ನ್ಯಾಯಾಲಯವು ನಡೆಸಿದ್ದು, ನ.10ರಂದು ಟ್ರಯಲ್ ಆರಂಭದ ದಿನಾಂಕ ನಿಗದಿಪಡಿಸಲಾಗಿದೆ. ಪ್ರಾಸಿಕ್ಯೂಷನ್ ಶೀಘ್ರದಲ್ಲೇ ಸಾಕ್ಷ್ಯಗಳ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಲು ತಯಾರಿ ನಡೆಸುತ್ತಿದೆ. ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 230 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಈ ಪೈಕಿ ಸುಮಾರು 70 ಅತ್ಯಂತ ಪ್ರಮುಖವಾಗಿವೆ. ಮೂರು ಪ್ರಮುಖ ಐ ವಿಟ್ನೆಸ್‌ಗಳು, ಸಿಸಿಟಿವಿ ದೃಶ್ಯಗಳು ಹಾಗೂ ಎಫ್‌ಎಸ್‌ಎಲ್ ವರದಿ ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳೂ ಸೇರಿವೆ.

ನ.10ಕ್ಕೆ ವಿಚಾರಣೆ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಮಂದಿ ಆರೋಪಿಗಳಿಗೆ ಇತ್ತೀಚಿಗೆ (ನವೆಂಬರ್​ 3) ದೋಷಾರೋಪ ನಿಗದಿ ಮುಕ್ತಾಯಗೊಂಡಿದ್ದು, ವಿಚಾರಣೆಯನ್ನು ನ.10ಕ್ಕೆ ಮುಂದೂಡಿ 64ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ