Breaking News

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the love

ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್​ ಮಾಡುವ ಬಗ್ಗೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಕಳೆದು ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದ್ದರೂ, ಸರ್ಕಾರದ ಯಾವುದೇ ಪ್ರತಿನಿಧಿಗಳು ಸ್ಥಳಕ್ಕೆ ಬಾರದೇ ಇರುವುದರಿಂದ ರೈತರು ಮತ್ತಷ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲದೆ, ಜಿಲ್ಲೆಯ ಹಲವು ಗ್ರಾಮಗಳು ಹಾಗೂ ಪಟ್ಟಣದ ಪ್ರಮುಖ ರಸ್ತೆಗಳನ್ನು ಬಂದ್​ ಮಾಡಿದ್ದಾರೆ. ಇದರಿಂದ ಜನರು ಸಂಚಾರಕ್ಕೆ ಪರದಾಡುವಂತಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ರೈತರು ಸರ್ಕಾರದ ವಿರುದ್ಧ ಅರೆಬೆತ್ತಲೆಯಾಗಿ ಪ್ರತಿಭಟನೆ ಕುಳಿತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ”ಕಳೆದ ಏಳು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೂ ಸಹ ಸರ್ಕಾರದ ಯಾವುದೇ ಸಚಿವರು, ಪ್ರತಿನಿಧಿಗಳು ಇಲ್ಲಿಗೆ ಬಂದಿಲ್ಲ. ನಮ್ಮ ಅಧ್ಯಕ್ಷರು ಹೇಳಿದ್ದು, ನ.7ರಂದು ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಲಿದ್ದೇವೆ. ನಮ್ಮ ಬಿಲ್​ ಕೊಡುವವರೆಗೂ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರಸ್ತೆ ಮೇಲೆಯೇ ಇರುತ್ತೇವೆ” ಎಂದು ಆಕ್ರೋಶ ಹೊರಹಾಕಿದರು. ಇದೇ ವೇಳೆ, ರೈತರು ಸರ್ಕಾರದ ವಿರುದ್ಧ ಬೊಬ್ಬೆ ಹೊಡೆದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ