Breaking News

ಕನ್ನೇರಿ ಶ್ರೀಗಳಿಗೆ ನಿರ್ಬಂಧ; ಉಮೇಶ ವಂದಾಲ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

Spread the love

ವಿಜಯಪುರ:ಕನ್ನೇರಿ ಶ್ರೀಗಳಿಗೆ ನಿರ್ಬಂಧ; ಉಮೇಶ ವಂದಾಲ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಆ್ಯಂಕರ್: ವಿಜಯಪುರ ನಗರದಲ್ಲಿ ಹಿಂದೂ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಕನ್ನೆರಿ ಮಠದ ಅದೃಷ್ಟ ಕಾಡಸಿದ್ದೇಶ್ವರ ಶ್ರೀಗಳ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆ ಪ್ರವೇಶ ನಿರ್ಬಂಧಿಸಿ ರುವುದನ್ನು ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿದವು.
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಸರ್ಕಾರ ಕೂಡಲೇ ಶ್ರೀಗಳ ನಿರ್ಬಂಧವನ್ನು ಹಿಂಪಡೆಯಬೇಕು, ಇಲ್ಲವಾದರೆ ಮುಂಬರುವ ದಿನಗಳಲ್ಲಿ ಇನ್ನೂ ಉಗ್ರವಾದ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಬಿಜೆಪಿ ಮುಖಂಡ ವಿಜಯಕುಮಾರ ಅವರು, ರಾಜಕೀಯ ಕುತಂತ್ರದಿಂದ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿದರು.
ಹಿಂದೂ ಸಮಾಜಕ್ಕಾಗಿ ಹೋರಾಡಿದ ಮತ್ತು ಕೃಷಿಯಲ್ಲಿ ಹದಿಮೂರು ಪಿಎಚ್‌ಡಿಗಳನ್ನು ಪಡೆದ ಶ್ರೀಗಳ ಈ ನಿರ್ಬಂಧದ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಅವರು ಆರೋಪಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಉಮೇಶ ವಂದಾಲ, ಮಹೇಂದ್ರ ನಾಯಕ, ಶ್ರೀಧರ ಬಿಜ್ಜರಗಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ