Breaking News

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the love

ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಭಾಲ್ಕಿ ತಾಲೂಕಿನ ನೀಲಂನಹಳ್ಳಿ ತಾಂಡಾ ಹತ್ತಿರದ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.

ನೆರೆಯ ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನ್ನಾಥಪುರದ ರಾಚಪ್ಪ ರಾಮಚಂದ್ರಪ್ಪ ಬಿರಾದಾರ್ (51), ಚಾಲಕ ನವನಾಥ ಶರಣಪ್ಪ (25), ಯಲ್ಲವಾಯಿ ಗ್ರಾಮದ ನಾಗರಾಜು ಇಸ್ಟಯ್ಯಾ (38) ಸ್ಥಳದಲ್ಲಿಯೇ ಮೃತಪಟ್ಟರೆ, ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಜಗನ್ನಾಥಪುರಿಯ ಕಾಶಿನಾಥ ರಾಮಶೆಟ್ಟಿ (62) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಪ್ರತಾಪ್ ಮಾಣಿಕರಾವ ಬಿರಾದಾರ (38) ಎಂಬುವರ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾರಿನಲ್ಲಿ ತೆಲಂಗಾಣದ ಜಗನ್ನಾಥಪುರಿ ಗ್ರಾಮದಿಂದ ಐವರು ಮಂಗಳವಾರ ಕಲಬುರಗಿ ಜಿಲ್ಲೆಯ ದೇವಲಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಮರಳಿ ಸ್ವಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಎದುರಿನಿಂದ ಬಂದ ಗೂಡ್ಸ್ ವಾಹನ ಡಿಕ್ಕಿಯಾಗಿ ಘಟನೆ ನಡೆದಿದೆ.ತಕ್ಷಣ ಧನ್ನೂರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಜೆಸಿಬಿ ಯಂತ್ರದಿಂದ ಅಪಘಾತಕ್ಕೀಡಾದ ಎರಡು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಧನ್ನೂರ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ