Breaking News

ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!

Spread the love

ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!

ಚಿಕ್ಕಮಗಳೂರು, ನವೆಂಬರ್​ 06: ಪೊಲೀಸರು ಸೀಜ್​ ಮಾಡಿದ್ದ ಕಾರಣ​ ಒಂದು ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ‌ಸಚಿವ ದಿ .ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗ್​ನ ಸಾಂಗ್ಲಿ ಪೊಲೀಸರ ನೆರವು ಪಡೆದು ಬಂಧಿಸಲಾಗಿತ್ತು. ಈ ವೇಳೆ ಆರೋಪಿಗಳು ಎಸ್ಕೇಪ್​ ಆಗಲು ಬಳಸಿದ್ದ ಕಾರನ್ನು ಸೀಜ್​ ಮಾಡಲಾಗಿತ್ತು. ಆದರೆ, ಈಗ ನ್ಯಾಯಾಲಯ ಕಾರನ್ನ ರಿಲೀಸ್​ ಮಾಡುವಂತೆ ಆದೇಶಿಸಿದೆ. ಈ ಹಿನ್ನಲೆ ಕಾರನ್ನು ಪರಿಶೀಲಿಸುವಾಗ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ.

ಕಾರಿನ ಸೀಟ್​ನಡಿ ಚಿನ್ನ, ಬೆಳ್ಳಿ ಪತ್ತೆ

ಪರಿಶೀಲನೆ ವೇಳೆ ಕಾರಿನ ‌ ಸೀಟ್ ಅಡಿಯಲ್ಲಿ 595 ಗ್ರಾಂ ಚಿನ್ನ, 589 ಗ್ರಾಂ ಬೆಳ್ಳಿ, 3,41,150 ರೂ. ಹಣ ಪತ್ತೆಯಾಗಿದೆ. ವಶಕ್ಕೆ ಪಡೆಯಲಾದ ಹಣ ಮತ್ತು ವಸ್ತುಗಳ ಮೌಲ್ಯ ಕೋಟಿಗೂ ಅಧಿಕ ಎನ್ನಲಾಗಿದ್ದು, ಕಳ್ಳತನವಾಗಿದ್ದ ಮೌಲ್ಯಕ್ಕಿಂದ ಅಧಿಕ ಚಿನ್ನ ಮತ್ತು ಬೆಳ್ಳಿ ಈ ವೇಳೆ ಪತ್ತೆಯಾಗಿದೆ. ಹೀಗಾಗಿ ಗ್ಯಾಂಗ್​ ಇನ್ನೂ ಹಲವೆಡೆ ಕೈಚಳಕ ತೋರಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.


Spread the love

About Laxminews 24x7

Check Also

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the loveಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ