Breaking News

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the love

ಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗರ್ಭವತಿಯಾಗಿದ್ದ ಬಾಲಕಿ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದು, 21 ವರ್ಷದ ಆರೋಪಿ ಅಣ್ಣನ ವಿರುದ್ಧ ಬಾಲಕಿ ದೂರಿನನ್ವಯ ಪೋಕ್ಸೋ ಕೇಸ್ ದಾಖಲಾಗಿದೆ. ಸದ್ಯ ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆ ಏನು?

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆರೋಪಿ ಅಣ್ಣ ತನ್ನ ಅಪ್ರಾಪ್ತೆ ತಂಗಿ ಬಳಿ ತಾನು ನಿನ್ನನ್ನು ಮದುವೆ ಆಗುವುದಾಗಿ ಹೇಳಿದ್ದ. ನಿನ್ನನ್ನು ಯಾವತ್ತೂ ಕೈಬಿಡಲ್ಲ, ಚೆನ್ನಾಗಿ ನೋಡಿಕೊಳ್ಳುತ್ತೇನೆ. ಯಾರೂ ನಿನಗೆ ಏನು ಹೇಳದ ರೀತಿ ಕಾವಲಾಗಿ ಇರುತ್ತೇನೆ ಎಂದೆಲ್ಲ ಪುಸಲಾಯಿಸಿದ್ದ. ಈ ವೇಳೆ ಸಂತ್ರಸ್ತೆ ಇದನ್ನು ವಿರೋಧಿಸಿದ್ದು ಸಮಾಜ ಈ ರೀತಿಯ ಸಂಬಂಧವನ್ನು ಒಪ್ಪಲ್ಲ ಎಂದಿದ್ದಳು. ಹೀಗಿದ್ದರೂ ಆಕೆಯ ಬೆನ್ನು ಬಿದ್ದಿದ್ದ ಆತ ಮನೆಯಲ್ಲಿ ಯಾರು ಇಲ್ಲದೆ ಇರುವಾಗ ತಂಗಿಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದ. ಫೆಬ್ರವರಿಯಿಂದ ಇವರ ನಡುವೆ ಈ ರೀತಿ ಸಂಬಂಧ ನಡೆದುಕೊಂಡು ಬಂದಿದ್ದು, ವಿಷಯವನ್ನು ಮನೆಯವರಿಗೆ ತಿಳಿಸಲು ಸಂತ್ರಸ್ತೆ ಯತ್ನಿಸಿದ್ದಳು. ಆದರೆ ಈ ವೇಳೆ ವಿಷಯ ಮನೆಯವರಿಗೆ ಹೇಳಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಆರೋಪಿ ಬೆದರಿಸಿದ್ದ ಎನ್ನಲಾಗಿದೆ.


Spread the love

About Laxminews 24x7

Check Also

ಬೆಂಗಳೂರು ಸಾಕಾಗಿದೆ, ಯಾರನ್ನೂ ಇಲ್ಲಿಗೆ ಕರೆಯಬೇಡಿ’ ಎಂಬ ರೆಡ್ಡಿಟ್‌ನಲ್ಲಿ ವೈರಲ್ ಆಗಿರುವ ಪೋಸ್ಟ್ ನಗರದ ಸಮಸ್ಯೆಗಳನ್ನು ಬಿಚ್ಚಿಟ್ಟಿದೆ.

Spread the loveಬೆಂಗಳೂರು ಸಾಕಾಗಿದೆ, ಯಾರನ್ನು ಇಲ್ಲಿಗೆ ಬನ್ನಿ ಎಂದು ಕರೆಯಬೇಡಿ ಎಂಬ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ