ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಾತುಕತೆ ಮುಂದಾಗಿತ್ತು. ಅಂತೆಯೇ ಬುಧವಾರ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಸರ್ಕಾರದ ಪರವಾಗಿ ರೈತರ ಜೊತೆ ಸಭೆ ನಡೆಸಿದರೂ ಯಾವುದೇ ಸಂಧಾನ ಆಗಿಲ್ಲ. ಇದರಿಂದ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಜೊತೆ ರೈತ ಮುಖಂಡ ಶಶಿಕಾಂತ ಗುರೂಜಿ ಮಾತನಾಡಿ, ಕಳೆದ ಏಳು ದಿನಗಳಿಂದ ನಮ್ಮ ಹೋರಾಟದ ಫಲವಾಗಿ ಇವತ್ತು ಸಚಿವರು ಕಬ್ಬಿಗೆ ಸೂಕ್ತವಾದ ಬೆಲೆ ನಿಗದಿಪಡಿಸುತ್ತಾರೆ ಎಂದು ನಾವು ತಿಳಿದಿದ್ದೆವು. ಆದರೆ ಸಚಿವರು ಎಲ್ಲಾ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುತ್ತೇನೆ, ನಾನು ಕಬ್ಬಿಗೆ ಬೆಲೆ ನಿಗದಿಪಡಿಸುವುದಿಲ್ಲ ಎಂದು ಹೇಳಿದರು. ಗುರುವಾರ ರಾತ್ರಿ 8 ಗಂಟೆಯವರೆಗೆ ಸರ್ಕಾರಕ್ಕೆ ನಾವು ಕಾಲಾವಕಾಶ ನೀಡಿದ್ದೇವೆ. ಒಂದು ವೇಳೆ ನಮಗೆ ಸೂಕ್ತ ಬೆಲೆ ನೀಡದಿದ್ದರೆ, ಬರುವ 7ನೇ ತಾರೀಕು (ಶುಕ್ರವಾರ) ಕರ್ನಾಟಕದಾದ್ಯಂತ ಸುಮಾರು 50 ಲಕ್ಷ ಕಬ್ಬು ಬೆಳೆಗಾರರು ಆಯಾ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಸಚಿವರು ಮಾಹಿತಿ ಕೊರತೆಯಿಂದ ಸ್ಥಳಕ್ಕೆ ಬಂದಿದ್ದರು. ನಮ್ಮ ಹೋರಾಟ ಮುಂದುವರಿಯುತ್ತದೆ, ನಾವು ಕಬ್ಬಿಗೆ ಸೂಕ್ತವಾದ ಬೆಲೆಯನ್ನು ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.
Laxmi News 24×7