Breaking News

ಬ್ಬು ಬೆಳೆಗಾರರ ಹೋರಾಟಕ್ಕೆ ಹಾವೇರಿ ಜಿಲ್ಲೆಯ 10ಕ್ಕೂ ಅಧಿಕ ಮಠಾಧೀಶರ ಬೆಂಬಲ

Spread the love

ಹಾವೇರಿ: ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಎಂಟು ದಿನ ಪೂರೈಸಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರೂ ಸಹ ಇದೀಗ ಸೂಕ್ತ ಬೆಲೆಗೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ.

ಹಾವೇರಿ ತಾಲೂಕಿನ ಸಂಗೂರು, ರಟ್ಟಿಹಳ್ಳಿ ತಾಲೂಕಿನ ಬೈರನಪಾದ ಮತ್ತು ಶಿಗ್ಗಾಂವ್ ತಾಲೂಕಿನ ಕೋಣನಕೆರೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿವೆ. ಈ ಕಾರ್ಖಾನೆಗಳ ಮಾಲೀಕರು ಹಾವೇರಿ ಜಿಲ್ಲೆಯ ರೈತರ ಕಬ್ಬಿಗೆ ಸೂಕ್ತ ಬೆಲೆ ನೀಡುತ್ತಿಲ್ಲ ಎಂದು ಆರೋಪಿಸಿ ಹಾವೇರಿ ಕಬ್ಬು ಬೆಳೆಗಾರರ ಸಂಘ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಕಬ್ಬಿನ ದರದಲ್ಲಿ ಮೋಸ, ತೂಕದಲ್ಲಿ ಮೋಸ ಮತ್ತು ಸಕ್ಕರೆ ಪ್ರಮಾಣದಲ್ಲಿ ಮೋಸವಾಗುತ್ತಿದೆ. ರೈತರ ಕಬ್ಬು ಖರೀದಿಯ ತೂಕದ ಯಂತ್ರ ಬೇರೆ ಇರುತ್ತೆ. ಆದರೆ ಸಕ್ಕರೆ ತೂಕದ ಯಂತ್ರ ಬೇರೆ ಇರುತ್ತದೆ. ಕಬ್ಬಿನಲ್ಲಿ ಸಕ್ಕರೆ ಅಂಶ ಕಡಿಮೆ ತೋರಿಸಿ ಮೋಸ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದರು. ಈ ರೀತಿಯ ಮೋಸ ನಿಲ್ಲಿಸಬೇಕು, ಕನಿಷ್ಠ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಮಠಾಧೀಶರ ಬೆಂಬಲ: ಹಾವೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟಕ್ಕೆ ಹಾವೇರಿ ಜಿಲ್ಲೆಯ 10ಕ್ಕೂ ಅಧಿಕ ಮಠಾಧೀಶರು ಬೆಂಬಲ ಸೂಚಿಸಿದರು. ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳು ರೈತರ ಜೊತೆ ಪ್ರತಿಭಟನೆ ನಡೆಸಿದರು. ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ, ಕೂಡಲದ ಗುರುನಂಜೇಶ್ವರ ಮಠದ ಮಹೇಶ್ವರ ಸ್ವಾಮೀಜಿ, ಹೊಂಕಣದ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ