ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ
ಚಾಮರಾಜನಗರ: ಕಬ್ಬಿಗೆ ಬೆಲೆ ಹೆಚ್ಚಳ ಘೋಷಣೆ ಮಾಡುವಂತೆ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ಚಾಮರಾಜನಗರದ ದೊಡ್ಡರಾಯಪೇಟೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಮಹೇಶ್ ಪ್ರಭು ಹಾಗೂ ಮಹೇಶ್ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ರೈತರು ರಾಷ್ಟ್ರೀಯ ಹೆದ್ದಾರಿಯನ್ನು ಒಂದು ತಾಸಿಗೂ ಅಧಿಕ ಕಾಲ ರಸ್ತೆ ತಡೆದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಪೊಲೀಸರು – ರೈತರ ನಡುವೆ ಜಟಾಪಟಿ: ರಸ್ತೆ ಬಂದ್ ಆರಂಭದಲ್ಲೇ ಟೈರ್ಗೆ ಬೆಂಕಿ ಹಚ್ಚಲು ರೈತರು ಮುಂದಾದಾಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ದೊಡ್ಡ ಜಟಾಪಟಿಯೇ ನಡೆಯಿತು. ಟೈರ್ ತಾನು ಕೊಡುವುದಿಲ್ಲ- ತಾನು ಬಿಡುವುದಿಲ್ಲ ಎಂಬಂತೆ ರೈತರು ಹಾಗೂ ಪೊಲೀಸರು ಎಳೆದಾಡಿದರು. ಈ ವೇಳೆ, ರೈತರು ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಕೆಳಗೆ ಬಿದ್ದರು.
Laxmi News 24×7