ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ.
ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಗೆ ಆಗ್ರಹಿಸಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸುವಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಈ ವೇಳೆ ರೈತರನ್ನು ಹೊರತು ಪಡಿಸಿ ಕೆಲ ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ವಾಗ್ವಾದ, ನೂಕಾಟ, ತಳ್ಳಾಟ ಶುರುವಾಗಿದ್ದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಈ ವೇಳೆ, ಹಲವು ಪೊಲೀಸರಿಗೆ ಕಲ್ಲು ತಾಗಿ ಗಾಯವಾಗಿದೆ. ಸಾರಿಗೆ ಬಸ್, ಲಾರಿ ಸೇರಿ ಐದಕ್ಕೂ ಅಧಿಕ ವಾಹನಗಳಿಗೆ ಕಲ್ಲು ತೂರಿದ ಪರಿಣಾಮ ಆ ವಾಹನಗಳ ಗಾಜು ಪುಡಿ ಪುಡಿ ಆಗಿವೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಭೇಟಿ ನೀಡಿದ್ದು,
ರೈತ ಮುಖಂಡರೊಂದಿಗೆ ಮಾತನಾಡಿ ಅವರನ್ನು ಮನವಲಿಸಲು ಪ್ರಯತ್ನಿಸುತ್ತಿದ್ದಾರೆ. ಈ ವೇಳೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಚೂನಪ್ಪ ಪೂಜಾರಿ ಸೇರಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Laxmi News 24×7