ಸವದತ್ತಿ ಟಿ.ಎ.ಪಿ.ಸಿ.ಎಂ.ಎಸ್. ಲಿಮಿಟೆಡ್, ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಗೋಕಾಕ ಮತ್ತು ಸವದತ್ತಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉದ್ದು, ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ ಆತಂಕವಿಲ್ಲದೆ ತಮ್ಮ ಬೆಳೆಗೆ ನ್ಯಾಯಯುತ ಬೆಲೆ ದೊರೆಯುವ ಮಹತ್ವದ ಕುರಿತು ವಿವರಿಸಿ, ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಲು ಮನವಿ ಮಾಡಿದೆನು. ಈ ಖರೀದಿ ಕೇಂದ್ರವು ರೈತರ ಆರ್ಥಿಕ ಭದ್ರತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದೆನು.
ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್‌ನ ಅಧ್ಯಕ್ಷರು, ಅಧಿಕಾರಿಗಳು, ಎಪಿಎಂಸಿ ಅಧ್ಯಕ್ಷರು, ಪುರಸಭೆ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ರೈತರು ಉಪಸ್ಥಿತರಿದ್ದರು.
Laxmi News 24×7