Breaking News

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…

Spread the love

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…
ಡಿನ್ನರ್ ಪಾರ್ಟಿಗೆ ಅವರೇನು ನನ್ನನ್ನು ಕರೆದಿಲ್ಲ; ಗೃಹ ಸಚಿವ ಜಿ.ಪರಮೇಶ್ವರ
ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ ದೆಹಲಿಯಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನ.16ರಂದು ದೆಹಲಿಯಲ್ಲಿ ಸಂಸದ ರಾಜಶೇಖರ ಹಿಟ್ನಾಳ್ ಮನೆಯಲ್ಲಿ ಡಿನ್ನರ್ ಪಾರ್ಟಿ ನಿಗದಿಯಾಗಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಬಣದ ಸಚಿವರು, ಶಾಸಕರು ಮತ್ತು ಸಂಸದರು ಕೂಡ ಈ ವೇಳೆ ಉಪಸ್ಥಿತರಿರಲಿದ್ದು, ಡಿನ್ನರ್ ಪಾರ್ಟಿ ಬಗ್ಗೆ ಹಿಟ್ನಾಳ್ ಸೋದರರು ಈಗಾಗಲೇ ಖಚಿತಪಡಿಸಿದ್ದಾರೆ.
ಇನ್ನು ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್ ದೆಹಲಿಯಲ್ಲಿ ಸಂಸದ ಹಿಟ್ನಾಳ್ ಔತಣಕೂಟ ಆಯೋಜನೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಡಿನ್ನರ್ ಪಾರ್ಟಿಗೆ ನನ್ನ ಅವರೇನು ಕರೆದಿಲ್ಲ, ಹಾಗಾಗಿ ನಾನು ಹೋಗಲ್ಲ. ಸಿಎಂ ದೆಹಲಿಗೆ ಹೋಗ್ತಿರೋದು ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಎಂದು ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ‌ ಸಂಬಂಧ ಪೊಲೀಸ್ ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದಾರೆ. ಇಂತಹದ್ದನ್ನೆಲ್ಲ ಸಹಿಸಿಕೊಳ್ಳಲು ಆಗಲ್ಲ. ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಿದ್ದು, ಘಟನೆ ಸಂಬಂಧ ಎಡಿಜಿಪಿ ದಯಾನಂದ್ ಜೊತೆ ಮಾತನಾಡಿದ್ದೇನೆ. ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ ಎಂದು ಗೃಹ ಸಚಿವರು ಹೇಳಿದ್ದಾರೆ. ಅಲ್ಲದೆ, ಈ ಬಗ್ಗೆ ತನಿಖೆ ಮಾಡಿ ವರದಿ ಕೊಡಿ ಅಂತಾ ದಯಾನಂದ್ಗೆ ಹೇಳಿದ್ದೇನೆ. ಪೊಲೀಸ್ ವರದಿ ಸಮಾಧಾನ ತರದಿದ್ರೆ ಸಮಿತಿ ಮಾಡಿ ತನಿಖೆ ಮಾಡಲಾಗುತ್ತೆ. ಉಗ್ರ ಆಗಲಿ ಯಾರೇ ಆಗಲಿ ಜೈಲಿನಲ್ಲಿ ಕೈದಿಗಳಿಗೆ ಫೋನ್ ಕೊಡುವ ಹಾಗೆ ಇಲ್ಲ. ಹೀಗಿರುವಾಗ ಪದೇ ಪದೆ ಈ ರೀತಿ ಯಾಕೆ ಆಗ್ತಿದೆ ಅಂತಾ ಪ್ರಶ್ನಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ