Breaking News

ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Spread the love

ಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿಈ ದುರಂತ ನಡೆದಿದ್ದು, ಮೃತ ಬಾಲಕರನ್ನು 12 ವರ್ಷದ ಅನಿಕೇತ್ ಕುಮಾರ್ ಹಾಗೂ 11 ವರ್ಷದ ರೆಹಮಾತ್ ಬಾಬಾ ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ, ಬಾಲಕ ಅನಿಕೇತ್ ಕುಮಾರ್ ಪೋಷಕರು ಬಿಹಾರ ಮೂಲದವರಾಗಿದ್ದು, ರೆಹಮಾತ್ ಬಾಬಾ ಪೋಷಕರು ಆಂಧ್ರ ಮೂಲದ ಕದಿರಿ ಮೂಲದವರು ಎಂದು ಹೇಳಲಾಗುತ್ತಿದೆ.

ಈ ಇಬ್ಬರು ಬಾಲಕರು ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಇಬ್ಬರೂ ಕೂಡ ಮನೆಯ ಹತ್ತಿರವೇ ಆಟ ಆಡಿಕೊಂಡಿದ್ದರು. ಆದರೆ ಆಟ ಆಡುತ್ತಾ ಅವರು ಕೆರೆಯ ಬಳಿ ಹೋಗಿದ್ದು, ಈ ಸಮಯದಲ್ಲಿ ನೀರನ್ನು ನೋಡಿ ಕೆರೆಗೆ ಇಳಿದಿದ್ದಾರೆ. ಆದರೆ ಈಜು ಬರದ ಕಾರಣ, ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ನಿನ್ನೆ ಪೂರ್ತಿ ಹುಡುಕಾಡಿದ್ದ ಪೋಷಕರು: ಪೋಷಕರು ಮಕ್ಕಳು ಆಟ ಆಡಿಕೊಂಡು ಸುತ್ತ-ಮುತ್ತಲೇ ಇದ್ದಾರೆ ಎಂದು ಭಾವಿಸಿದ್ದರು. ಆದರೆ ಸಂಜೆ ಆದರೂ ಮಕ್ಕಳು ಮನೆಗೆ ಹಿಂತಿರುಗಿ ಬರದೇ ಹಿನ್ನೆಲೆಯಲ್ಲಿ ಪೋಷಕರಿಗೆ ಆತಂಕ ಆಗಿದೆ. ತಕ್ಷಣವೇ ಮನೆಯ ಸುತ್ತಮುತ್ತ ಹಾಗೂ ಊರಿನಲ್ಲಿ ಸಹ ಹುಡುಕಾಡಿದ್ದಾರೆ. ಆದರೆ ಎಷ್ಟೇ ಹೊತ್ತಾದರೂ ಸಹ ಮಕ್ಕಳ ಸುಳಿವು ಸಿಕ್ಕಿರಿಲಿಲ್ಲ. ಆದರೆ ಇಂದು ಬೆಳಗ್ಗೆ ಕೆರೆಯಲ್ಲಿ ಮಕ್ಕಳ ದೇಹ ತೆಲುತ್ತಿರುವುದು ಪತ್ತೆ ಆಗಿದ್ದು, ತಕ್ಷಣವೇ ಗ್ರಾಮಸ್ಥರು ಅತ್ತಿಬೆಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ