Breaking News

ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ

Spread the love

ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ
ಮುಂಬರುವ ಒಂದು ವಾರ 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ಜಮೆ; ಸಿಎಂ ಸಿದ್ಧರಾಮಯ್ಯ
ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ
ಮುಂಬರುವ ಒಂದು ವಾರ 15 ದಿನಗಳಲ್ಲಿ ಬೆಳೆಹಾನಿ ಪರಿಹಾರ
ಸಿಎಂ ಸಿದ್ಧರಾಮಯ್ಯ ಭರವಸೆ
ದೆಹಲಿ ಬಾಂಬ್ ಬ್ಲಾಸ್ಟ್ ಬಿಹಾರ ಚುನಾವಣೆ ಮೇಲೆ ಪರಿಣಾಮ
ಅತಿವೃಷ್ಠಿಯಿಂದ ರಾಜ್ಯದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಬೆಳೆಹಾನಿಯಾಗಿದೆ. ಮುಂಬರುವ ಒಂದು ವಾರ 15 ದಿನಗಳಲ್ಲಿ ಬೆಳೆಹಾನಿಗೊಳಗಾದ ರೈತರ ಖಾತೆಗೆ ನೇರವಾಗಿ ಪರಿಹಾರದ ಹಣವನ್ನು ಜಮೆ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಈ ಬಾರಿ ಅತಿವೃಷ್ಠಿ ಹಿನ್ನೆಲೆ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಕ್ಟೋಬರ್’ನಲ್ಲಿ ಅತಿವೃಷ್ಠಿಯಿಂದ 11 ರಿಂದ 12 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಕಂದಾಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಸಮೀಕ್ಷೆ ನಡೆಸಲಾಗಿದ್ದು, ಶೀಘ್ರದಲ್ಲೇ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು. ಬೆಳಗಾವಿ, ಕಲ್ಬುರ್ಗಿ, ಗದಗ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಬೆಳೆಹಾನಿಯಾಗಿದೆ. ಇದನ್ನು ವೈಮಾನಿಕ ಸಮೀಕ್ಷೆ ನಡೆಸಿ ಈಗಾಗಲೇ ತಿಳಿದುಕೊಳ್ಳಲಾಗಿದೆ.
ಇನ್ನು ಚುನಾವಣೆ ಸಂದರ್ಭದಲ್ಲೇ ಬಾಂಬ್ ಬ್ಲಾಸ್ಟ್ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ದೆಹಲಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವುದು ಸರಿಯಲ್ಲ. ಭದ್ರತಾ ವೈಫಲ್ಯವೋ ಏನೋ ಎಂಬುದನ್ನು ತನಿಖೆಯಿಂದ ನೋಡಬೇಕು. ಇದು ಬಿಹಾರ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇನ್ನು ಭಾರತವು ಹಿಂದೂರಾಷ್ಟ್ರ ಎಂದು ಜನಸಂಘದಿಂದ ಹೇಳುತ್ತಾ ಬರುತ್ತಿದ್ದಾರೆ. ಇದು ಸಾಧ್ಯವಿಲ್ಲ. ಭಾರತ ಬಹುತ್ವದ ದೇಶ ಎಂದರು.

Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ