Breaking News
Home / ರಾಜ್ಯ / ಬಾರ್, ರೆಸಾರ್ಟ್‍ಗಳಿಗೆ ಮಾರ್ಗ ಸೂಚಿ

ಬಾರ್, ರೆಸಾರ್ಟ್‍ಗಳಿಗೆ ಮಾರ್ಗ ಸೂಚಿ

Spread the love

ಬೆಂಗಳೂರು, ಡಿ.31- ಕೋವಿಡ್-19ರ ಸೋಂಕು ಹರಡುವಿಕೆ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಪ್ರವಾಸೋದ್ಯಮ ಇಲಾಖೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಅನುಮೋದಿತ ಹೊಟೇಲ್ ಮತ್ತು ರೆಸಾರ್ಟ್‍ಗಳಿಗೆ ನೀಡಿದೆ. ಪ್ರವಾಸೋದ್ಯಮ ಇಲಾಖೆ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಬೆಂಗಳೂರು ವಿಭಾಗದ ಉಪ ನಿರ್ದೇಶಕರ ಕಚೇರಿಗೆ ತಲುಪಿಸಬೇಕು. ಒಂದು ವೇಳೆ ಮಾರ್ಗಸೂಚಿ ಪಾಲನೆ ಬಗ್ಗೆ ಅನುಮತಿ ಪಡೆಯದಿದ್ದರೆ ತಮ್ಮ ವ್ಯವಹಾರ ಸ್ಥಗಿತಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಿದೆ.

ಅನುಮತಿ ಪಡೆಯದೆ ಹೊಟೇಲ್ ಅಥವಾ ರೆಸಾರ್ಟ್ ವ್ಯವಹಾರ ಮುಂದುವರಿಸಿದರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ. ಹೊಟೇಲ್, ರೆಸಾರ್ಟ್ ಒಳಭಾಗದಲ್ಲಿ ಹಾಗೂ ಮುಂಭಾಗದಲ್ಲಿ ಕೋವಿಡ್ ಜಾಗೃತಿ ಮೂಡಿಸುವ ಫೋಸ್ಟರ್ ಮತ್ತು ಸ್ಟ್ಯಾಂಡ್‍ಗಳನ್ನು ಅಳವಡಿಸಬೇಕು.

ಬಿಬಿಎಂಪಿ ಪ್ರಾಧಿಕಾರದಿಂದ ಹಾಗೂ ಸ್ಥಳೀಯ ಪೊಲೀಸ್ ಠಾಣೆಯಿಂದ ನಿರಾಕ್ಷೇಪಣಾ ಪತ್ರ ಕಡ್ಡಾಯವಾಗಿ ಪಡೆದಿರಬೇಕು. ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ, ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರದಿಂದ ಅನುಮತಿ ಪತ್ರ ಪಡೆದಿರಬೇಕು. ಅಗ್ನಿ ಅನಾಹುತಗಳಿಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಬಕಾರಿ ಇಲಾಖೆಯಿಂದ ಪಡೆದಿರುವ ಲೈಸೆನ್ಸ್ ಪ್ರತಿ ಹಾಗೂ ಎಕೋ ಸೆನ್ಸೆಟಿವ್ ಜೋನ್ ವ್ಯಾಪ್ತಿಗೆ ಒಳಪಟ್ಟಿರುವ ಅಥವಾ ಒಳಪಡದಿರುವ ಬಗ್ಗೆ ಅನುಮತಿ ಪತ್ರ ಪಡೆದಿರಬೇಕು.

ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ, ಭದ್ರತಾ ವ್ಯವಸ್ಥೆ, ವೈದ್ಯಕೀಯ ಸೌಲಭ್ಯಗಳು ಹಾಗೂ ವಾಸ್ತವ್ಯಕ್ಕೆ ಸಂಬಂಧಿಸಿದಂತೆ ದರ ಪಟ್ಟಿಯನ್ನು ಪ್ರದರ್ಶಿಸಿರಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ನೀಡಲಾಗಿದೆ.ಅನಧಿಕೃತವಾಗಿ ನಡೆಯುತ್ತಿರುವ ಕೆಲವು ಹೊಟೇಲ್ ಮತ್ತು ರೆಸಾರ್ಟ್‍ಗಳಲ್ಲಿ ಮಾದಕ ವಸ್ತುಗಳ ಬಳಕೆ, ಸೇವನೆಗೆ ಉತ್ತೇಜಿಸುವಂತಹ ಕಾರ್ಯಗಳು ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ಭದ್ರತೆಗೆ ಧಕ್ಕೆಯಾಗದಂತೆ ಪ್ರವಾಸೋದ್ಯಮ ಇಲಾಖೆ ಮಾರ್ಗಸೂಚಿ ಹೊರಡಿಸಿರುವುದಾಗಿ ತಿಳಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ