ಮಂಡ್ಯ: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದವರಾದ ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿರಲಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೇ ನಟನಿಗೆ ಹೃದಯ ಸಂಬಂಧಿ ಸಮಸ್ಯೆ, ಕೆಮ್ಮು, ಉಬ್ಬಸ, ಶ್ರವಣದೋಷ ಸೇರಿದಂತೆ ವಯೋಸಹಜ ಅನಾರೋಗ್ಯ ಸಮಸ್ಯೆಗಳಿದ್ದವು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ‘ತಿಥಿ’ಯಲ್ಲಿ ಗಡ್ಡಪ್ಪ ಅಭಿನಯಿಸಿದ್ದರು. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಸಾಕಷ್ಟು ಮೆಚ್ಚುಗೆ ಪಡೆಯಿತು. ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನೂ ಬಾಚಿಕೊಂಡಿತ್ತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ಗಡ್ಡಪ್ಪ ಎಂದೇ ಗುರುತಿಸಿಕೊಂಡರು. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
Laxmi News 24×7