Breaking News

ಕುರುಬರ ಸಂಘ, ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು: ಸಿಎಂ

Spread the love

ಬೆಂಗಳೂರು: ನಾನು ಮೊದಲಿನಿಂದಲೂ ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸುವ ಸನಾತನವಾದಿ ಆರ್​​ಎಸ್​​ಎಸ್ ವಿರೋಧಿಯಾಗಿದ್ದೇನೆ. ಈ ಕಾರಣಕ್ಕಾಗಿ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದೇನೆ. ಈ ಮೂಲಕ ಜಾತಿ ಪದ್ದತಿ ಹಾಗೂ ಮೌಢ್ಯದ ವಿರುದ್ದ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು. ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರ್​ಎಸ್​ಎಸ್​​ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು ಆರ್​ಎಸ್​ಎಸ್ ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕೆಂದು ಪ್ರತಿಪಾದಿಸಿದ್ದೆ ಎಂದರು.

8 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ: ನೂರು ವರ್ಷದ ಹಳೆ ಕಟ್ಟಡ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣ ಮಾಡಬೇಕೆಂದು ಪ್ರದೇಶ ಕುರುಬರ ಸಂಘದಿಂದ ಹಲವು ವರ್ಷಗಳಿಂದ ಬೇಡಿಕೆ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ, 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್​​ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್​​ಗಳೂ ಆಗಿದ್ದಾರೆ. ನಾನು 1983ರಲ್ಲಿ ಶಾಸಕನಾಗಿ 1984ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ. ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು. ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ