Breaking News

ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿದ ಜನ

Spread the love

ಬೆಂಗಳೂರು: ವಿಶೇಷಚೇತನ ಯವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಸ್ಥಳಿಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನವೆಂಬರ್​​ 9ರಂದು ಆಡುಗೋಡಿಯ ಎಂ.ಆರ್​. ನಗರದಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಮಾಹಿತಿಯನ್ವಯ ಆರೋಪಿ ವಿಘ್ನೇಶ್​ ಅಲಿಯಾಸ್​ ದಾಡು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾತು ಬಾರದ, ಕಾಲು ಸ್ವಾಧೀನವಿರದ 21 ವರ್ಷ ವಯಸ್ಸಿನ ಯುವತಿಯನ್ನು ಮನೆಯಲ್ಲಿ ಬಿಟ್ಟು, ಹೊರಗಿನಿಂದ ಬಾಗಿಲ ಚಿಲಕ ಹಾಕಿಕೊಂಡು ಆಕೆಯ ಪೋಷಕರು ಸಮೀಪದಲ್ಲೇ ಇದ್ದ ಮದುವೆ ಸಮಾರಂಭವೊಂದಕ್ಕೆ ತೆರಳಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಗಾಂಜಾ ನಶೆಯಲ್ಲಿ ಮನೆ ಬಳಿ ಬಂದಿದ್ದ ಆರೋಪಿ ವಿಘ್ನೇಶ್, ಬಾಗಿಲ ಚಿಲಕ ತೆಗೆದು ಒಳಗೆ ನುಗ್ಗಿದ್ದ.

ಕೆಲ ಹೊತ್ತಿನ ಬಳಿಕ ಮಗಳನ್ನು ನೋಡಿಕೊಂಡು ಹೋಗೋಣವೆಂದು ಆಕೆಯ ತಾಯಿ ಮನೆಗೆ ಬಂದಾಗ ಒಳಗಿನಿಂದ ಬಾಗಿಲ ಚಿಲಕ ಹಾಕಲಾಗಿತ್ತು. ಆತಂಕಗೊಂಡ ಯುವತಿಯ ತಾಯಿ ಕಾಲಿನಿಂದ ಒದ್ದು ಬಾಗಿಲು ತೆರೆದು ನೋಡಿದಾಗ ಆರೋಪಿಯ ಹೀನ ಕೃತ್ಯ ಬಯಲಾಗಿತ್ತು. ಯುವತಿಯ ತಾಯಿಯಮನ್ನು ಕಂಡೊಡನೆ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಸ್ಥಳಿಯರೇ ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ