ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ “ಡಾ. ಶಿವಬಸವ ಮಹಾಸ್ವಾಮಿ ಜಿ ರೈಲ್ವೆ ನಿಲ್ದಾಣ” ಎಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಿದೆ.
ಗುರು ಬಸವಣ್ಣನವರ ತತ್ವಗಳ ಪ್ರಚಾರಕರು, ಶ್ರೀ ರುದ್ರಾಕ್ಷಿ ಮಠದ ಪರಮಪೂಜ್ಯ ಲಿಂಗೈಕ್ಯ ಡಾ. ಶಿವಬಸವ ಮಹಾಸ್ವಾಮಿಗಳು ಗಡಿನಾಡು ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಹಾಗೂ ನಾಡು–ನುಡಿಯ ರಕ್ಷಣೆಯ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಶಿಕ್ಷಣ, ಆರೋಗ್ಯ, ಸಾಮಾಜಿಕ ಜಾಗೃತಿ ಮತ್ತು ಸಮಾಜಸೇವೆಯ ಕ್ಷೇತ್ರಗಳಲ್ಲಿ ಅವರು ನೀಡಿದ ಅಪ್ರತಿಮ ಕೊಡುಗೆ ಅಮೂಲ್ಯವಾಗಿದೆ. ಅವರ ತ್ಯಾಗಮಯ ಜೀವನ ಮತ್ತು ಜನಸೇವೆಯ ನಿಷ್ಠೆ ನಿಜಾರ್ಥದಲ್ಲಿ ಸಮಾಜಸೇವೆಯ ಶ್ರೇಷ್ಠ ಮಾದರಿಯಾಗಿದೆ. ಅವರ ಗೌರವಾನ್ವಿತ ಹೆಸರನ್ನು ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ನಾಮಕರಣ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಲಿ ಎಂಬುದು ನಮ್ಮೆಲ್ಲರ ಹೃತ್ಪೂರ್ವಕ ಅಪೇಕ್ಷೆ.
ಮಠದ ಆಶ್ರಯದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ನೀಡಿದ ಮಹಾಸ್ವಾಮಿಗಳು ನಿಷ್ಕಾಮ ಸೇವೆ, ತ್ಯಾಗ ಮತ್ತು ಸಮರ್ಪಣೆಯ ಜೀವಂತ ಪ್ರತಿರೂಪರಾಗಿದ್ದಾರೆ. ಅವರ ಹೆಸರಿನಲ್ಲಿ ಬೆಳಗಾವಿ ರೈಲ್ವೆ ನಿಲ್ದಾಣವನ್ನು ನಾಮಕರಣ ಮಾಡಲು ಮುಂದಾದ ರಾಜ್ಯ ಸರ್ಕಾರಕ್ಕೆ ಜಿಲ್ಲೆಯ ಜನರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
#satishjarkiholi #belagavi #railwaystation
Laxmi News 24×7