Breaking News

ಬಿಹಾರ ಚುನಾವಣೆ *ಎನ್ ಡಿ ಎ ಬಹುಮತ:ಕಡಾಡಿ ಸಂತಸ*

Spread the love

ಬಿಹಾರ ಚುನಾವಣೆ
*ಎನ್ ಡಿ ಎ ಬಹುಮತ:ಕಡಾಡಿ ಸಂತಸ*
ಮೂಡಲಗಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ನಡೆಸಿದ್ದ ಓಟ್ ಚೋರಿ ಎಂಬ ಸುಳ್ಳು ಅಭಿಯಾನವನ್ನು ಜನ ದಿಕ್ಕರಿಸಿ ಎನ್‌.ಡಿ.ಎ ಮೈತ್ರಿಕೂಟವನ್ನು ಬಾರಿ ಬಹುಮತದಿಂದ ಗೆಲ್ಲಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಅತೀಯಾಗಿ ತುಷ್ಟೀಕರಣ ರಾಜಕಾರಣದ ಮೂಲಕ ಒಂದು ಧರ್ಮದ ಜನರನ್ನು ಓಲೈಸುವುದನ್ನು ಮತದಾರರು ತಿರಸ್ಕಾರ ಮಾಡಿರುವುದು ಬಹಳ ಸ್ಪಷ್ಟವಾಗಿದೆ. ಈ ದೇಶ ಕಂಡ ಅಭಿವೃದ್ದಿ ಪರ ಚಿಂತಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನ ಬಹಳ ದೊಡ್ಡ ಪ್ರಮಾಣದಿಂದ ಒಪ್ಪಿರುವುದು ಇದರಿಂದ ತಿಳಿದು ಬರುತ್ತದೆ ಮತ್ತು ಅವರ ನಾಯಕತ್ವವನ್ನು ಪ್ರಶ್ನಿಸಿ ವಿನಾಕಾರಣ ಸುಳ್ಳು ಆರೋಪ ಮಾಡುವವರು ಕೂಡಾ ಇದರಿಂದ ಪಾಠ ಕಲಿಯಬೇಕಾಗಿದೆ ಎಂದರು.
ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಅವರ ಆಡಳಿತಕ್ಕೆ ಬಿಹಾರದ ಮತದಾರರು ಅಭೂತಪೂರ್ವ ಗೆಲುವು ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಎನ್‌ಡಿಎ ಅಭ್ಯರ್ಥಿಗಳಿಗೆ ಅಭಿನಂದನೆಗಳು ಹಾಗೂ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ