Breaking News

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ: 6 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Spread the love

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ: 6 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಯಮಕನಮರಡಿ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ನವೆಂಬರ್ 7ರಂದು ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಡಿವೈಎಸ್​​ಪಿ ಮಹಾಂತೇಶ ಸಜ್ಜನ ಸೇರಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸ್ ವಾಹನ, ಕೆಎಸ್ಆರ್​​ಟಿಸಿ ಬಸ್ ಸೇರಿ ಖಾಸಗಿ ವಾಹನಗಳನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದರು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಭೇಟಿ ನೀಡಿ, ಪರಿಸ್ಥಿತಿ ಹತೋಟಿಗೆ ತಂದಿದ್ದರು. ಅಲ್ಲದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಕಲ್ಲು ತೂರಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಸಿದ್ದರು. ಆ ಪ್ರಕಾರ ಆರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರು ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮದ ಶಿವಪ್ಪ ತಾತಪ್ಪ ವಾಣಿ, ಹೆಬ್ಬಾಳ ಗ್ರಾಮದ ನಿವಾಸಿಗಳಾದ ವಿನಾಯಕ ದುರದುಂಡಿ ಕೋಟೆವಾಲೆ, ಚನ್ನಗೌಡ ಬಸವರಾಜ ಸಸಾಲಟ್ಟಿ, ಪ್ರಶಾಂತ ಅಶೋಕ ಮುಗಳಿ, ಉಳ್ಳಾಗಡ್ಡಿ ಖಾನಾಪುರದ ಮಲ್ಲಪ್ಪ ಶಿವಪ್ಪ ಘಟ್ಟಿಗಿ, ಬಿದ್ರೆವಾಡಿಯ ಸೋಮನಾಥ ಬಸಯ್ಯ ಹಿರೇಮಠ ಎಂದು ಗುರುತಿಸಲಾಗಿದೆ.

ಎಸ್​ಪಿ ಮಾಹಿತಿ: ಸುದ್ದಿಗೋಷ್ಠಿ ನಡೆಸಿ‌ ಮಾತನಾಡಿದ ಡಾ.ಭೀಮಾಶಂಕರ ಗುಳೇದ, ‘ದೊಂಬಿ, ಗುಂಪು ಗಲಭೆ, ಮಾರಣಾಂತಿಕ ಹಲ್ಲೆ ಪ್ರಕರಣದಡಿ ಕೇಸ್ ದಾಖಲಿಸಲಾಗಿದೆ.‌ ಆರೋಪಿಗಳು ಪ್ರತಿಭಟನಾ ಸ್ಥಳದಲ್ಲಿ ಉದ್ದೇಶಪೂರ್ವಕವಾಗಿ ರೈತರ ಹೆಸರಿನಲ್ಲಿ ಶಾಲು ಹಾಕಿಕೊಂಡು ಬಂದಿದ್ದರು. ಅಂತವರನ್ನು ರೈತರು ಅನ್ನಲು ಆಗಲ್ಲ‌. ಅಮಾಯಕ ರೈತರನ್ನು ಬಂಧಿಸಿದ್ದೇವೆ ಅಂತಾ ಯಾರಾದರೂ ಆರೋಪ ಮಾಡಬಹುದು. ಆದರೆ, ಶಾಲು ಹಾಕಿಕೊಂಡು ಬಂದು ಕಲ್ಲು ತೂರಾಟ ಮಾಡಿದವರನ್ನು ರೈತರು ಎನ್ನಲು ಆಗುವುದಿಲ್ಲ. ವಿಡಿಯೋ ತುಣಕು, ಸಿಸಿಟಿವಿ ದೃಶ್ಯಗಳನ್ನು ಖಚಿತ ಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದೇವೆ’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ