Breaking News

ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು

Spread the love

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ.

ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

ಈ ಹಿಂದೆ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಈ ಎಲ್ಲಾ ಗಾಸಿಪ್ ಗಳಿಗೆ ಧ್ರುವ ಆಪ್ತ ವಲಯ ಉತ್ತರ ಕೊಟ್ಟಿತ್ತು. ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ತಿಂಗಳು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಆರಾಮಾಗಿದ್ದಾರೆ. ತಂದೆ, ತಾಯಿ ಕೂಡ ಆರಾಮಾಗಿದ್ದಾರೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ