ಬೆಂಗಳೂರು: ಪ್ರಯಾಣಿಕರನ್ನು ಸಾಗಿಸಲು ಅಥವಾ ಬಾಡಿಗೆಗೆ ಅದರ ಬಳಕೆ ಮಾಡಬಹುದು ಎಂದು ಶಾಸನದಲ್ಲಿ ವ್ಯಾಖ್ಯಾನಿಸದೇ ಇರುವುದರಿಂದ ಮೋಟಾರು ಸೈಕಲ್‌ಗಳು ಸಾರಿಗೆ ವಾಹನಗಳನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ವಿವರಿಸಿದೆ.
ಮೋಟಾರು ವಾಹನಗಳ ಕಾಯಿದೆ 1988ರ ಅನ್ವಯ ಮಾರ್ಗಸೂಚಿ ರಚನೆ ಮಾಡುವವರೆಗೂ ಬೈಕ್ಗಳನ್ನು ಟ್ಯಾಕ್ಸಿಗಳನ್ನಾಗಿ ಪರಿಗಣಿಸಲಾಗದು ಎಂದು ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ಉಬರ್ ಇಂಡಿಯಾ, ರ್ಯಾಪಿಡೊ, ಓಲಾ, ಉಬರ್ ಸೇರಿದಂತೆ ಹಲವು ಅಗ್ರಿಗೇಟರ್ ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, ಮೋಟಾರು ಸೈಕಲ್ ವ್ಯಾಖ್ಯಾನದಲ್ಲಿ ಅದು ಪ್ರಯಾಣಿಕರನ್ನು ಸಾಗಿಸಲು ಇರುವ ವಾಹನ ಎಂದು ಹೇಳಿಲ್ಲ. ಮೋಟಾರು ವಾಹನಗಳ ಕಾಯಿದೆ ಅಥವಾ ನಿಯಮಗಳಲ್ಲೂ ಪ್ರಯಾಣಿಕರನ್ನು ಮೋಟಾರ್ ಸೈಕಲ್ ಹೊತ್ತೊಯ್ಯಬಹುದು ಎಂದು ಹೇಳಿಲ್ಲ. ಮೋಟಾರ್ ಸೈಕಲ್, ಮೋಟಾರ್ ಕ್ಯಾಬ್ ವ್ಯಾಖ್ಯಾನದ ಅಡಿ ಬರುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಮೋಟಾರ್ ಸೈಕಲ್, ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನವಲ್ಲ, ಇದನ್ನು ಬಾಡಿಗೆ ಅಥವಾ ಹಣ ಸಂಪಾದಿಸಲು ಬಳಕೆ ಮಾಡಲಾಗದು. ಅನುಮತಿ ನೀಡುವುದು ರಾಜ್ಯ ಸರ್ಕಾರದ ವಿಶೇಷ ಅಧಿಕಾರವಾಗಿದೆ. ಮೋಟಾರ್ ಸೈಕಲ್‌ಗಳನ್ನು ವಾಣಿಜ್ಯ ಸಾರಿಗೆಗೆ ಬಳಕೆ ಮಾಡುವುದು ಮತ್ತು ಆ ಅನುಮತಿಯನ್ನು ನಿಯಂತ್ರಣ ಮಾರ್ಗಸೂಚಿಗಳ ಗೈರಿನಲ್ಲಿ ಅಂತಹ ಸೇವೆಯನ್ನು ಮುಂದುವರೆಸಲಾಗದು. ದೇಶದ 18 ರಾಜ್ಯಗಳಲ್ಲಿ ನಿರ್ದಿಷ್ಟವಾಗಿ ರಾಜ್ಯಗಳು ನಿಯಂತ್ರಣ ಮಾರ್ಗಸೂಚಿ ರೂಪಿಸಿದ ಮೇಲೆ ಬೈಕ್ ಟ್ಯಾಕ್ಸಿಗಳು ಸೇವೆ ನೀಡುತ್ತಿವೆ. ಈ ಸಂಸ್ಥೆಗಳು(ಅಗ್ರಿಗ್ರೇಟರ್ಗಳು) ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯಲ್ಲಿ ವಾದಿಸುವುದಕ್ಕೆ ಅವಕಾಶವಿಲ್ಲ ಎಂದು ಪೀಠಕ್ಕೆ ವಿವರಿಸಿದರು.
Laxmi News 24×7