Breaking News

ಕಿತ್ತೂರು ರಾಣಿ‌ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

Spread the love

ಬೆಳಗಾವಿ/ಬೆಂಗಳೂರು: ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ (ನ.13) 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ.

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸಂಬಂಧ ಡಿಎಫ್​ಒ ಎನ್.ಇ.ಕ್ರಾಂತಿ ಅವರನ್ನು ಈಟಿವಿ ಭಾರತ ಪ್ರತಿನಿಧಿ ಸಂಪರ್ಕಿಸಿದಾಗ, ”ಬ್ಯಾಕ್ಟಿರಿಯಲ್ ಇಂಜೆಕ್ಷನ್​ನಿಂದ ಕೃಷ್ಣಮೃಗಗಳು ಮೃತಪಟ್ಟಿವೆ. ಬೆಂಗಳೂರಿನ ಬನ್ನೇರುಘಟ್ಟದ ಪಶು ವಿಜ್ಞಾನ ಸಂಸ್ಥೆಯ ತಜ್ಞ ವೈದ್ಯರು ಬರುತ್ತಿದ್ದು, ಅವರು ಪರೀಕ್ಷೆ ನಡೆಸಲಿದ್ದಾರೆ. ಮೊನ್ನೆ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೆ 20 ಮೃತಪಟ್ಟಿವೆ. ಇದರಿಂದ ಒಟ್ಟು 28 ಜಿಂಕೆಗಳು ಸಾವನ್ನಪ್ಪಿರುವುದು ಆಘಾತಕಾರಿ ಸಂಗತಿ” ಎಂದು ತಿಳಿಸಿದರು.

ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಒಟ್ಟು 38 ಕೃಷ್ಣಮೃಗಗಳು ಇದ್ದವು. ಅದರಲ್ಲಿ ಈಗ 10 ಕೃಷ್ಣಮೃಗಗಳು ಮಾತ್ರ ಉಳಿದಿವೆ. ಎಸಿಎಫ್ ನಾಗರಾಜ ಬಾಳೇಹೊಸೂರ, ಮೃಗಾಲಯ ಸಂರಕ್ಷಣಾಧಿಕಾರಿ ಪವನ್ ಕುರನಿಂಗ, ಆರೋಗ್ಯ ಅಧಿಕಾರಿ ಸೇರಿ ಮತ್ತಿತರು ಸ್ಥಳದಲ್ಲಿಯೇ ಇದ್ದು, ಇನ್ನುಳಿದ ಪ್ರಾಣಿಗಳ ಆರೋಗ್ಯ ತಪಾಸಣೆಯಲ್ಲಿ ನಿರತರಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ