ಹುಬ್ಬಳ್ಳಿ(ಧಾರವಾಡ): ಹೃದಯಾಘಾತವಾಗಿ ಸಾವನ್ನಪ್ಪಿದ ಎಎಸ್ಐಯೋರ್ವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ (58) ಅವರು ಭಾನುವಾರ(ನ.16) ಬೆಳಗ್ಗೆ ಹೃದಯಾಘಾತದಿಂದ ಹುಬ್ಬಳ್ಳಿ ಸುಚರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾದರು. ತಮ್ಮವರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಕೂಡ ಅವರ ಕುಟುಂಬ ಚಂದ್ರಕಾಂತ ಅವರ 2 ಕಣ್ಣುಗಳನ್ನು ದಾನ ಮಾಡಿದ್ದಾರೆ.ಚಂದ್ರಕಾಂತ ಹುಟಗಿ ಪರಿಚಯ: ಅಕ್ಟೋಬರ್ 24, 1993ರಲ್ಲಿ ಪೊಲೀಸ್ ಇಲಾಖೆ ಸೇವೆಗೆ ಸೇರಿಕೊಂಡಿದ್ದ ಚಂದ್ರಕಾಂತ ಹುಟಗಿ ಅವರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ, ಎಲ್ಲ ಅಧಿಕಾರಿಗಳು, ಸಹೋದ್ಯೋಗಿಗಳಿಂದ ಮೆಚ್ಚುಗೆ ಗಳಿಸಿದ್ದರು. ಅವರು ನಿರಂತರವಾಗಿ 32 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
Laxmi News 24×7