Breaking News

ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು: 29ಕ್ಕೇರಿದ ಸಾವಿನ ಸಂಖ್ಯೆ

Spread the love

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಇದರಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿದೆ. ಕೃಷ್ಣಮೃಗಗಳ ಸಾವು ಪ್ರಾಣಿಪ್ರಿಯರ ಮನಸ್ಸಿಗೆ ನೋವುಂಟು ಮಾಡಿದೆ.

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಮತ್ತೊಂದು ಕೃಷ್ಣಮೃಗ ಇಂದು ಮೃತಪಟ್ಟಿದೆ. ನ.13 ರಂದು ಕಿರು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಮೃತಪಟ್ಟಿದ್ದವು.

ಮೃಗಾಲಯದಲ್ಲಿ ಒಟ್ಟು 38 ಕೃಷ್ಣ ಮೃಗಗಳು ಇದ್ದವು. ಈಗ 29 ಮೃತಪಟ್ಟಿದ್ದರಿಂದ ಇನ್ನು ಕೇವಲ 9 ಕೃಷ್ಣಮೃಗಗಳು ಮಾತ್ರ ಮೃಗಾಲಯದಲ್ಲಿದ್ದು, ಅವುಗಳ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ. ಬನ್ನೇರುಘಟ್ಟ ಮೃಗಾಲಯದಿಂದ ತಜ್ಞ ವೈದ್ಯರ ತಂಡ ಆಗಮಿಸಿ, ಪರಿಶೀಲನೆ ನಡೆಸಿದೆ. ಅದೇ ರೀತಿ ನಾಲ್ಕು ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆಯನ್ನು ಆ ತಂಡ ನಡೆಸಿದೆ.

ಕೃಷ್ಣಮೃಗಗಳ ಸಾವಿನ ಸಂಬಂಧ ವೈದ್ಯ ಡಾ. ಚಂದ್ರಶೇಖರ್ ಮಾಹಿತಿ ನೀಡಿದ್ದು, ”ಮೃತ ಕೃಷ್ಣ ಮೃಗಗಳ ಕಿಡ್ನಿ, ಹಾರ್ಟ್, ಲಿವರ್, ರಕ್ತ ಎಲ್ಲವನ್ನೂ ಸ್ಯಾಂಪಲ್ ಪಡೆದಿದ್ದೇವೆ. ಅವು ಲ್ಯಾಬ್​ಗೆ ರವಾನೆಯಾಗಲಿದ್ದು, ಮಂಗಳವಾರದ ಹೊತ್ತಿಗೆ ಕೃಷ್ಣಮೃಗಗಳ ಸಾವಿನ ಕುರಿತ ವರದಿ ಬರಲಿದೆ. ಬಳಿಕ ಅದನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

”ಬ್ಯಾಕ್ಟೀರಿಯಲ್ ಇನ್ಫೆಕ್ಷನ್​​ನಿಂದ ಕೃಷ್ಣಮೃಗಗಳು ಮೃತಪಟ್ಟಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ವೇಗವಾಗಿ ಒಂದರಿಂದ ಒಂದಕ್ಕೆ ಸೋಂಕು ಹರಡಿದ ಪರಿಣಾಮ ಇಲ್ಲಿಯವರೆಗೆ 29 ಕೃಷ್ಣಮೃಗಗಳು ಸಾವನ್ನಪ್ಪಿವೆ. ನಿನ್ನೆ ಸಾಯಂಕಾಲ ಮತ್ತು ಇಂದು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯದ ತಜ್ಞ ವೈದ್ಯರ ತಂಡ ಎಲ್ಲವನ್ನೂ ಪರಿಶೀಲನೆ ನಡೆಸಿದೆ. ಸದ್ಯ 9 ಕೃಷ್ಣಮೃಗಗಳಿಗೆ ಮುನ್ನೆಚ್ಚರಿಕೆಯಾಗಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ