Breaking News

ಬಂಡೀಪುರ ಹಾಗೂ ನಾಗರಹೊಳೆ ಕಾಡಂಚಿನ ಪ್ರದೇಶಗಳಲ್ಲಿ ಸುಮಾರು 20 ಹುಲಿಗಳ ಓಡಾಟ: ಡಿಸಿಎಫ್ ಪರಮೇಶ್ವರ್

Spread the love

ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶಗಳ ಕಾಡಂಚಿನ ಗ್ರಾಮಗಳ ಪ್ರದೇಶದಲ್ಲಿ ಸುಮಾರು 20 ಹುಲಿಗಳು ಓಡಾಟ ಮಾಡುತ್ತಿವೆ ಎಂದು ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್​) ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದ ಗುಂಡ್ಲುಪೇಟೆ, ಹೆಚ್.ಡಿ. ಕೋಟೆ, ಸರಗೂರು ಹಾಗೂ ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ಹಲವು ಕಾರಣಗಳು ಇವೆ ಎಂದರು.

ಸಾಕಾನೆಗಳಾದ ಭೀಮ, ಧನಂಜಯ ಸೇರಿದಂತೆ ಕಾರ್ಯಾಚರಣೆಯ ತಂಡದೊಂದಿಗೆ ಹುಲಿಸೆರೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಇದರ ಜೊತೆಗೆ ಡ್ರೋನ್ ಕ್ಯಾಮರಾದ ನೆರವಿನಿಂದ ಸಹ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಹುಲಿಗಳು ನಡೆದಾಡಿದ ಸ್ಥಳದ ಹೆಜ್ಜೆ ಗುರುತು, ದಾಳಿ ಮಾಡಿದ ಸ್ಥಳದಲ್ಲಿ ಬೋನ್ ಇಟ್ಟು ಡ್ರೋನ್ ಕ್ಯಾಮರಾದ ಮೂಲಕ ಹುಲಿಗಳ ಚಲನವಲನ ಗುರುತು ಮಾಡಿ, ಅವುಗಳನ್ನು ಸೆರೆ ಹಿಡಿಯಲು ಮುಂದಾಗಿದ್ದೇವೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ