Breaking News
Home / ಜಿಲ್ಲೆ / ಬೆಂಗಳೂರು / ಹೊಸ ವರ್ಷದ ಮೊದಲ ಚಿತ್ರವಾಗಿ ತೆರೆಗಪ್ಪಳಿಸಲಿದೆ ‘ರಾಜತಂತ್ರ’

ಹೊಸ ವರ್ಷದ ಮೊದಲ ಚಿತ್ರವಾಗಿ ತೆರೆಗಪ್ಪಳಿಸಲಿದೆ ‘ರಾಜತಂತ್ರ’

Spread the love

ಹೊಸ ವರ್ಷದ ಮೊದಲ ಚಿತ್ರವಾಗಿ ರಾಜತಂತ್ರ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಕೊರೊನಾ ಹಾವಳಿಯಿಂದ ಇಡೀ ಚಿತ್ರೋದ್ಯಮವೇ ಕಂಗಾಲಾಗಿದ್ದು , ಈಗಷ್ಟೆ ಕೆಲವು ಹೊಸಬರ ಚಿತ್ರಗಳು ಬಿಡುಗಡೆಗೊಳ್ಳುತ್ತಿವೆ. ಸ್ಟಾರ್ ನಟರಗಳ ಚಿತ್ರ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ.  ಇದೆ ಹುಮ್ಮಸ್ಸಿನೊಂದಿಗೆ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆP್ಸï ಗಳಲ್ಲಿ ಬಿಡುಗಡೆಗೊಳ್ಳುತ್ತಿದೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಜೆ .ಎಂ.ಪ್ರಹ್ಲಾದ್ ಬರೆದಿದ್ದಾರೆ. ಇದೊಂದು ಸಾಮಾಜಿಕ ಸಂದೇಶವಿರುವ ಸಿನಿಮಾವಾಗಿದೆಯಟತೆ. ಇಂತಹ ಚಿತ್ರವನ್ನು ನಿರ್ಮಾಪಕ ವಿಜಯ್ ಭಾಸ್ರ್ಕ ನಿರ್ಮಿಸಿದ್ದು, ಒಂದು ಉತ್ತಮ ಕಥೆಯ ಚಿತ್ರವನ್ನು ಜನರಿಗೆ ನೀಡುವ ಉದ್ದೇಶ ನಮ್ಮದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಚಿತ್ರವನ್ನು ಪಿ.ವಿ.ಆರ್.ಸ್ವಾಮಿ ನಿರ್ದೇಶನ ಮಾಡಿದ್ದಾರೆ.

ಈ ಹಿಂದೆ ಇವರು ರಾಘಣ್ಣ ನಟನೆಯ ಅಮ್ಮನ ಮನೆ ಸಿನಿಮಾದಲ್ಲಿ ಕೆಲಸ ಮಾಡಿದ್ದು , ಈ ಚಿತ್ರದಲ್ಲಿ ವಿಭಿನ್ನ ಪಾತ್ರವನ್ನು ನಿರ್ವಹಿಸಿದ್ದು , ಒಬ್ಬ ನಿವೃತ್ತ ಆರ್ಮಿ ಆಧಿಕಾರಿಯಾಗಿ ಕ್ಯಾಪ್ಟನ್ ರಾಜಾರಾಮ್ ಆಗಿ ಕಾಣಿಸಿಕೊಂಡಿದ್ದಾರೆ. ಸಮಾಜದೊಳಗಿನ ಲೋಪಗಳನ್ನು ತಮ್ಮದೆ ಶೈಲಿಯಲ್ಲಿ ಸರಿಪಡಿಸುವ ಪಾತ್ರವನ್ನು ನಿರ್ವಹಿಸಿದ್ದು , ಅದು ಹೇಗೆ ಎಂಬುದನ್ನು ಸಿನಿಮಾದಲ್ಲಿ ನೋಡಬಹುದು, ಅಷ್ಟೇ ಅಲ್ಲದೆ ಈ ಸಿನಿಮಾದಲ್ಲಿ ರಾಘಣ್ಣ ಅವರ ಫೈಟ್ ಸಹ ಮಾಡಿರುವುದು ವಿಶೇಷ.

ನಟ ರಾಘವೇಂದ್ರ ರಾಜ್‍ಕುಮಾರ್ ಕೂಡ ತಮ್ಮ ಎರಡನೇ ಇನ್ನಿಂಗ್ಸನ್ನು ಭರ್ಜರಿಯಾಗಿಯೇ ನಡೆಸುತ್ತಿದ್ದಾರೆ. ಈ ಹಿಂದೆ ಬಂದ ಅಮ್ಮನ ಮನೆ ಕೂಡ ಅವರಿಗೆ ರಾಜ್ಯ ಪ್ರಶಸ್ತಿ ತಂದುಕೊಟ್ಟಿತು. ಸದ್ಯ ಒಂದರ ಹಿಂದೆ ಒಂದಂತೆ ಚಿತ್ರಗಳು ಕೂಡ ಅವರಿಗೆ ದೊರಕುತ್ತಿದ್ದು, ಈ ವಾರ ಬಿಡುಗಡೆ ಆಗುತ್ತಿರುವ ರಾಜತಂತ್ರ ಚಿತ್ರ ಕೂಡ ಬಹಳಷ್ಟು ನಿರೀಕ್ಷೆಯನ್ನು ತಂದಿದೆಯಂತೆ. ಅವರ ಪ್ರಕಾರ , ತಮ್ಮ ಚಿತ್ರ ಪ್ರಯಾಣದಲ್ಲಿ ಈ ರೀತಿಯಾದಂಥ ಪಾತ್ರ ಮಾಡಿರಲಿಲ್ವಂತೆ


Spread the love

About Laxminews 24x7

Check Also

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ